ETV Bharat / state

ಕಾಫಿನಾಡಿನಲ್ಲಿ ಮುದುಡಿದ ಕಮಲ: ಜಿಲ್ಲೆಯ ಐದಕ್ಕೆ ಐದು ಕ್ಷೇತ್ರಗಳಲ್ಲಿ ಕೈ ಕಮಾಲ್​ - etv bharat kannada

ಬಿಜೆಪಿ ಭದ್ರಕೋಟೆ ಎಂದು ಗುರುತಿಸಿಕೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್​ ಐದಕ್ಕೆ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

Etv Bharatcongress won all five Constituency in chikkamagaluru
ಕಾಫಿನಾಡಿನಲ್ಲಿ ಮುದುಡಿದ ಕಮಲ: ಜಿಲ್ಲೆಯ ಐದಕ್ಕೆ ಐದು ಕ್ಷೇತ್ರಗಳಲ್ಲಿ ಕೈ ಕಮಾಲ್​
author img

By

Published : May 13, 2023, 6:35 PM IST

ಚಿಕ್ಕಮಗಳೂರು: ಬಿಜೆಪಿ ಭದ್ರಕೋಟೆ ಎಂದು ಗುರುತಿಸಿಕೊಂಡಿದ್ದ ಕಾಫಿ ನಾಡಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆದ್ದು ಬೀಗಿದೆ. ಈ 2018ರ ವಿಧಾನ ಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 4 ಕ್ಷೇತ್ರದಲ್ಲಿ ಬಿಜೆಪಿ ಮತ್ತು ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಶಾಸಕರಾಗಿದ್ದರು. ಈ ಜಿಲ್ಲೆಯಲ್ಲಿ ಸತತವಾಗಿ ಬಿಜೆಪಿ ಅಭ್ಯರ್ಥಿಗಳು ಅಧಿಕಾರದ ಚುಕ್ಕಾಯಿ ಹಿಡಿಯುತ್ತ ಬಂದಿದ್ದರು. ಆದರೆ ಈ ಬಾರಿ ಮತದಾರರು ಕಾಂಗ್ರೆಸ್​ ಕೈ ಹಿಡಿದಿದ್ದಾರೆ.

ರಾಜ್ಯದಲ್ಲಿ ಪ್ರಮುಖ ಕ್ಷೇತ್ರವಾಗಿ ಗುರುತಿಸಿಕೊಂಡಿದ್ದ ಚಿಕ್ಕಮಗಳೂರಿನಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕ್ಷೇತ್ರ ಅಭ್ಯರ್ಥಿಯಾಗಿರುವ ಸಿಟಿ ರವಿ ಹೀನಾಯ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಹೆಚ್. ಡಿ. ತಿಮ್ಮಯ್ಯ 85051 ಮತಗಳನ್ನು ಪಡೆದು ಗೆದ್ದಿದ್ದಾರೆ. ಸಿ. ಟಿ. ರವಿ 79120 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಸತತ ನಾಲ್ಕು ಬಾರಿ ವಿಜಯ ಸಾಧಿಸಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರತಿನಿಧಿಸುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಈಗ ಅವರ ಆಪ್ತ ಹೆಚ್ ​ಡಿ ತಮ್ಮಯ್ಯ ಕೈ ವಶವಾಗಿದೆ.

ಇನ್ನು ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಬಿಜೆಪಿಯು ದೀಪಕ್ ದೊಡ್ಡಯ್ಯ ವಿರುದ್ಧ ನಯನಾ ಮೋಟಮ್ಮ 2,419 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ. ಬಿಜೆಪಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು. ನಯನಾ ಮೋಟಮ್ಮ ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ಎಂಬುದು ವಿಶೇಷ.

ಶೃಂಗೇರಿ ವಿಧಾನ ಸಭಾಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ ಎನ್​ ಜೀವರಾಜ್​ ವಿರುದ್ಧ ಕಾಂಗ್ರೆಸ್​ ಅಭ್ಯರ್ಥಿ ರಾಜೇಗೌಡ ಅಲ್ಪ ಮತಗಳ ಅಂತರದಿಂದ ಗೆಲುವು ಸಾಧಸಿದ್ದಾರೆ. ಈ ಮೂಲಕ ರಾಜೇಗೌಡ ಸತತ ಎರಡನೇ ಬಾರಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದ್ದಾರೆ.

ತರೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ ಎಸ್​ ಸುರೇಶ್​ ವಿರುದ್ಧ ಕಾಂಗ್ರೆಸ್​ ಅಭ್ಯರ್ಥಿ ಜಿ ಹೆಚ್ ಶ್ರೀನಿವಾಸ್ 12,131 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕುರುಬರು ಮತ್ತು ಲಿಂಗಾಯಿತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಈ ಕ್ಷೇತ್ರದಲ್ಲಿ. ಒಮ್ಮೆ ಲಿಂಗಾಯತರು ಶಾಸಕರಾದರೆ ಮತ್ತೊಮ್ಮೆ ಕುರುಬರು ಶಾಸಕರಾಗಿದ್ದಾರೆ. ಅಂತೆಯೇ ಹಾಲಿ ಶಾಸಕ ಡಿ ಎಸ್​ ಸುರೇಶ್​ ಸೋಲುಂಡಿದ್ದಾರೆ. ಕುರುಬ ಸಮುದಾಯದ ಜಿ, ಹೆಚ್​ ಶ್ರೀನಿವಾಸ್ ಗೆದ್ದು ಬೀಗಿದ್ದಾರೆ.

ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಶಾಸಕ ಬೆಳ್ಳಿ ಪ್ರಕಾಶ್​ ವಿರುದ್ಧ ಕಾಂಗ್ರೆಸ್​ ಅಭ್ಯರ್ಥಿ ಕೆ. ಎಸ್ ಆನಂದ್ 12,306 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಈ ಮೂಲಕ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಕೈ ಕಮಾಲ್​ ಮಾಡಿದ್ದು, 20 ವರ್ಷದ ನಂತರ ಕಾಂಗ್ರೆಸ್​ ಇತಿಹಾಸ ಮರು ಸೃಷ್ಟಿ ಮಾಡಿದೆ. ಇನ್ನು ಜಿಲ್ಲೆಯಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ:ಎರಡು ದಶಕಗಳ ಚುನಾವಣಾ ಇತಿಹಾಸದಲ್ಲೇ ಜೆಡಿಎಸ್​ ಅತ್ಯಂತ ಕಳಪೆ ಸಾಧನೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.