ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದು, ಭದ್ರಾ, ತುಂಗಾ, ಹೇಮಾವತಿ, ನೇತ್ರಾವತಿ ನದಿಗಳ ನೀರಿನ ಹರಿವಿನ ಪ್ರಮಾಣವೂ ಹೆಚ್ಚಳವಾಗಿದೆ.
ಬಾಳೆಹೊನ್ನೂರು, ಹರಿಹರಪುರ, ಕಳಸ, ಕೊಪ್ಪ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ದಿನದಿಂದ ಮಳೆ ಸುರಿಯುತ್ತಿದೆ.