ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 259 ಜನರಲ್ಲಿ ಕೊರೊನಾ ಪತ್ತೆ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 259 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,607 ಕ್ಕೆ ಏರಿಕೆಯಾಗಿದೆ.

Chikmagalur
ಚಿಕ್ಕಮಗಳೂರು
author img

By

Published : Sep 23, 2020, 9:07 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 259 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,607 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 163 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 6,126 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 110, ಕಡೂರು ತಾಲೂಕಿನಲ್ಲಿ 45, ತರೀಕೆರೆ ತಾಲೂಕಿನಲ್ಲಿ 70, ಕೊಪ್ಪ ತಾಲ್ಲೂಕಿನಲ್ಲಿ 12, ಎನ್​ಆರ್​ಪುರ ತಾಲೂಕಿನಲ್ಲಿ 03, ಶೃಂಗೇರಿ ತಾಲೂಕಿನಲ್ಲಿ 04, ಮೂಡಿಗೆರೆ ತಾಲೂಕಿನಲ್ಲಿ 15 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಇಂದು ಈ ಸಂಖ್ಯೆಗೆ ನಾಲ್ಕು ಜನರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 114 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,607 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,391 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.