ETV Bharat / state

ಚಿಕ್ಕಮಗಳೂರಿನಲ್ಲಿ 74 ಕೊರೊನಾ ಕೇಸ್​ ಪತ್ತೆ: ಸೋಂಕಿತರ ಸಂಖ್ಯೆ 990ಕ್ಕೆ ಏರಿಕೆ - ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶುಕ್ರವಾರ 74 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

chikmagalur
ಚಿಕ್ಕಮಗಳೂರಿನಲ್ಲಿ ನಿನ್ನೆ 74 ಜನರಲ್ಲಿ ಕೊರೊನಾ ಸೋಂಕು ಪತ್ತೆ: ಪ್ರತ್ಯಕ್ಷ ವರದಿ
author img

By

Published : Aug 1, 2020, 2:13 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಬರೋಬ್ಬರಿ 74 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 990ಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರಿನಲ್ಲಿ ನಿನ್ನೆ 74 ಜನರಲ್ಲಿ ಕೊರೊನಾ ಸೋಂಕು ಪತ್ತೆ: ಪ್ರತ್ಯಕ್ಷ ವರದಿ

ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ನಿನ್ನೆ 6 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 440 ಜನ ಸೋಂಕಿತರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ 28, ಕಡೂರು ತಾಲೂಕಿನಲ್ಲಿ 16, ತರೀಕೆರೆ ತಾಲೂಕಿನಲ್ಲಿ 17, ಶೃಂಗೇರಿ ತಾಲೂಕಿನಲ್ಲಿ 02, ಕೊಪ್ಪ ತಾಲೂಕಿನಲ್ಲಿ 04, ಮೂಡಿಗೆರೆ ತಾಲೂಕಿನಲ್ಲಿ ಒಬ್ಬರು, ಎನ್​ಆರ್​ಪುರ ತಾಲೂಕಿನಲ್ಲಿ 02, ಅಜ್ಜಂಪುರದಲ್ಲಿ 04, ಜನರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ 21 ಜನರು ಸಾವನಪ್ಪಿದ್ದಾರೆ.

ನಿನ್ನೆ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್​​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 990ಕ್ಕೆ ಏರಿಕೆಯಾಗಿದ್ದು, 529 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.