ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 113 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,569 ಕ್ಕೆ ಏರಿಕೆಯಾಗಿದೆ. ಜೊತೆಗೆ 20 ಜನರು ಗುಣಮುಖರಾಗಿದ್ದಾರೆ.
ಈವರೆಗೂ ಜಿಲ್ಲೆಯಲ್ಲಿ ಒಟ್ಟು 654 ಸೋಂಕಿತರು, ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 40, ಕಡೂರು ತಾಲೂಕಿನಲ್ಲಿ 34, ತರೀಕೆರೆ ತಾಲೂಕಿನಲ್ಲಿ 22, ಮೂಡಿಗೆರೆ ತಾಲೂಕಿನಲ್ಲಿ 08, ಅಜ್ಜಂಪುರದಲ್ಲಿ 07, ಶೃಂಗೇರಿ ತಾಲೂಕಿನಲ್ಲಿ 02, ಜನರಲ್ಲಿ ಈ ಸೋಂಕು ಪತ್ತೆ ಆಗಿದೆ. ಈ ದಿನ ಇಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ.
ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,569 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 884 ಸಕ್ರಿಯ ಪ್ರಕರಣಗಳಿವೆ.