ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸ್ಥಿತಿಗತಿ ಬಗ್ಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು 'ಈಟಿವಿ ಭಾರತ' ಜೊತೆ ವೈರಸ್ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಬಗ್ಗೆ ಸುದೀರ್ಘವಾಗಿ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆಯಲಾಗುತ್ತಿದೆ. ರೆಸಾರ್ಟ್, ಹೋಂ ಸ್ಟೇ, ಹೋಟೆಲ್ಗಳಿಗೆ ಬರುವ ಪ್ರವಾಸಿಗರನ್ನು ಕರೆದುಕೊಳ್ಳಬಾರದು ಎಂದು ಮಾಲೀಕರಿಗೆ ಮಾಹಿತಿ ರವಾನೆ ಮಾಡಲಾಗಿದೆ ಎಂದರು.
ಹೋಟೆಲ್ಗಳಲ್ಲಿ ಕೂತು ಊಟ ಮಾಡಬಾರದು. ಪಾರ್ಸಲ್ ಮಾತ್ರ ತೆಗೆದುಕೊಂಡು ಹೋಗಬಹುದು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹೆಚ್ಚು ಜನರು ಬರದಂತೆ ನಿರ್ಬಂಧಿಸಲಾಗಿದೆ. ಖಾಸಗಿ ಬಸ್ ಸಂಚಾರ ಜಿಲ್ಲೆಯಲ್ಲಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಅದರ ಸಂಚಾರ ಕೂಡ ಬಂದ್ ಮಾಡಲಾಗುತ್ತದೆ ಎಂದು ಹೇಳಿದರು.
ಜನತಾ ಕರ್ಫ್ಯೂ ಮುಂದುವರಿಸುವ ಬಗ್ಗೆ ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲ. ಒಂದು ವೇಳೆ ಆದೇಶ ಬಂದರೆ ಮತ್ತೆ ಕರ್ಫ್ಯೂ ಮುಂದುವರೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.