ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 111 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 1,929ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 333 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 1,304 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಬ್ಬರು ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಸದ್ಯ, ಜಿಲ್ಲೆಯಲ್ಲಿ 587 ಸಕ್ರಿಯ ಪ್ರಕರಣಗಳಿವೆ.
ತಾಲೂಕುವಾರು ಸೋಂಕಿತರು: ಚಿಕ್ಕಮಗಳೂರು ತಾಲೂಕಿನಲ್ಲಿ 53, ಕಡೂರು 16, ತರೀಕೆರೆ 34, ಮೂಡಿಗೆರೆ 07 ಹಾಗೂ ಶೃಂಗೇರಿಯ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.