ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 26 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.
ಅಲ್ಲದೆ, ಇಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಮೂವರು ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 384 ಜನರು ಗುಣಮುಖರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ 13, ಕಡೂರು 10, ತರೀಕೆರೆ 2, ಕೊಪ್ಪ ತಾಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 703ಕ್ಕೆ ಏರಿಕೆಯಾಗಿದೆ.
ಇಂದು ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. 300 ಸಕ್ರಿಯ ಪ್ರಕರಣಗಳಿವೆ.