ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ಕ್ಷೇತ್ರದ ಶಾಸಕ ಸುರೇಶ್ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ ಸೋಮವಾರ ಬೆಂಗಳೂರಿಗೆ ಶಾಸಕ ಸುರೇಶ್ ಹೋಗಿ ಬಂದಿದ್ದರು. ಹಬ್ಬದ ನಂತರ ಕ್ಷೇತ್ರದಲ್ಲೇ ಉಳಿದುಕೊಂಡಿದ್ದರು. ಕಳೆದ ನಾಲ್ಕು ದಿನಗಳಿಂದ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸದ್ಯ ಶಿವಮೊಗ್ಗದ ನವ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕಿತ್ಸೆ ಬಳಿಕ ಮನೆಯಲ್ಲೇ ಹೋಂ ಐಸೋಲೇಷನ್ ಆಗಲಿದ್ದು, ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.