ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಹಾಗೂ ಅವರ ಪತ್ನಿಗೆ ಕೊರೋನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ.
ವಿಧಾನ ಪರಿಷತ್ ಸದಸ್ಯರಿಗೆ ಸೋಂಕು ತಗುಲಿರುವುದರಿಂದ ಅವರ ಟ್ರಾವೆಲ್ ಹಿಸ್ಟರಿ ಮತ್ತು ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚುವುದು ತಾಲೂಕು ಆಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ. ಘಟ್ಟದಹಳ್ಳಿಯಲ್ಲಿರುವ ಅವರ ಮನೆಯನ್ನು ಈಗಾಗಲೇ ಸೀಲ್‌ಡೌನ್ ಮಾಡಲಾಗಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೂ ಒಟ್ಟು 48 ಜನ ಸೋಂಕಿತರು ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ತರೀಕೆರೆ ತಾಲೂಕಿನ ಅಜ್ಜಂಪುರ ಮೂಲದ ಓರ್ವ ವಯೋವೃದ್ಧೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.