ಚಿಕ್ಕಮಗಳೂರು: ಕೊರೊನಾ ಪರೀಕ್ಷೆಯ ವರದಿ ಬರುವ ಮೊದಲೇ ಶಾಲೆಗೆ ಹಾಜರಾಗಿದ್ದ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಮೂಡಿಗೆರೆ ತಾಲೂಕಿನ ಕಳಸದ ಜೆ.ಎಂ.ಇ ಸ್ಕೂಲ್ನ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಪರೀಕ್ಷೆಯ ವರದಿ ಬರುವ ಮೊದಲೇ ಶಿಕ್ಷಕರು ಶಾಲೆಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಯನ್ನು ಬಂದ್ ಮಾಡಲಾಗಿದೆ. ಈ ಶಾಲೆಯಲ್ಲಿ 15 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 13 ಶಿಕ್ಷಕರಿಗೆ ಕೊರೊನಾ ನೆಗೆಟಿವ್ ಬಂದಿದೆ.
ಶಾಲೆಯ ಆಡಳಿತ ಮಂಡಳಿ ಎಡವಟ್ಟಿನಿಂದ ಶಾಲೆಗೆ ಶಿಕ್ಷಕರು ಆಗಮಿಸಿದ್ದು, ಈ ಘಟನೆಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಮೂಡಿದೆ.