ಚಿಕ್ಕಮಗಳೂರು/ಮಂಗಳೂರು : ಜಿಲ್ಲೆಯಲ್ಲಿ ಇಂದು 57 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ, 12.162 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 163 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 11,291 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 09, ಕಡೂರು ತಾಲೂಕಿನಲ್ಲಿ 24, ಮೂಡಿಗೆರೆ ತಾಲೂಕಿನಲ್ಲಿ 01, ತರೀಕೆರೆ ತಾಲ್ಲೂಕಿನಲ್ಲಿ 02, ಶೃಂಗೇರಿ ತಾಲ್ಲೂಕಿನಲ್ಲಿ 12, ಕೊಪ್ಪ ತಾಲ್ಲೂಕಿನಲ್ಲಿ 01, ಎನ್ಆರ್ಪುರ ತಾಲೂಕಿನಲ್ಲಿ 08, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 136 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,162 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 572 ಸಕ್ರಿಯ ಪ್ರಕರಣಗಳಿವೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಓರ್ವ ಸಾವನ್ನಪ್ಪಿದ್ದಾದ್ದು, ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 668 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 122 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಈವರೆಗೆ 29,815 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 260 ಮಂದಿ ಗುಣಮುಖರಾಗಿದ್ದು, ಈವರೆಗೆ 26,858 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 2,289 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 2,48,350 ಮಂದಿಯ ತಪಾಸಣೆ ನಡೆಸಲಾಗಿದ್ದು ಇದರಲ್ಲಿ 2,18,535 ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 9,871 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ರೂ 1,111,285 ದಂಡ ವಸೂಲಿ ಮಾಡಲಾಗಿದೆ.