ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 99, ಚಿಕ್ಕಮಗಳೂರಿನಲ್ಲಿ 56 ಜನರಲ್ಲಿ ಕೊರೊನಾ ಸೋಂಕು ಪತ್ತೆ... - Mangalore

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 99 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಈವರೆಗೆ 29,914 ಮಂದಿಗೆ ಕೊರೊನಾ ದೃಢಪಟ್ಟಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ದಿನ 56 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

Chikmagalur
ಚಿಕ್ಕಮಗಳೂರು
author img

By

Published : Oct 28, 2020, 9:44 PM IST

ಮಂಗಳೂರು/ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 671 ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 99 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಈವರೆಗೆ 29,914 ಮಂದಿಗೆ ಕೊರೊನಾ ದೃಢಪಟ್ಟಿದೆ.

Mangalore
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 99 ಮಂದಿಗೆ ಕೊರೊನಾ ಸೋಂಕು

ಜಿಲ್ಲೆಯಲ್ಲಿ ಇಂದು 161 ಮಂದಿ ಗುಣಮುಖರಾಗಿದ್ದು ಈವರೆಗೆ 27,019 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2,224 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 2,51,859 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 2,21,945 ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 10,010 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ರೂ 1,122,535 ದಂಡ ವಸೂಲಿ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ದಿನ 56 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ, 12,218 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 101 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 11,454 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 13, ಕಡೂರು ತಾಲೂಕಿನಲ್ಲಿ 19, ಮೂಡಿಗೆರೆ ತಾಲೂಕಿನಲ್ಲಿ 05, ತರೀಕೆರೆ ತಾಲ್ಲೂಕಿನಲ್ಲಿ 13, ಶೃಂಗೇರಿ ತಾಲ್ಲೂಕಿನಲ್ಲಿ 02, ಎನ್ಆರ್​ಪುರ ತಾಲೂಕಿನಲ್ಲಿ 04 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 136 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,218 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 527 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.