ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 262 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,533ಕ್ಕೆ ಏರಿಕೆಯಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಒಟ್ಟು 4,677 ಜನ ಸೋಂಕಿತರು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಕೊರೊನಾ ಸೋಂಕಿಗೆ ಮೂರು ಜನರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 104ಕ್ಕೆ ಏರಿದೆ.
ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,533 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,752 ಸಕ್ರಿಯ ಪ್ರಕರಣಗಳಿವೆ.