ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ನಂದಿಪುರ ವೈದ್ಯನಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸರ್ಕಾರ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದೆ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.
ಕೆಲವರು ವೈದ್ಯನಿಗೆ ಕೊರೊನಾ ನೆಗೆಟಿವ್ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಿಬಿಡುತ್ತಿದ್ದಾರೆ. ಜನರಿಗೆ ತಪ್ಪು ಮಾಹಿತಿ ನೀಡುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ಬಗ್ಗೆ ಗಮನ ಕೊಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಂದಿಪುರ ವೈದ್ಯನಿಗೆ ಕೊರೊನಾ ಬಂದಿರೋದು ಸತ್ಯ. 7 ದಿನಗಳ ನಂತರ ಸರ್ಕಾರ ಪ್ರಕಟಣೆ ಬಿಡುಗಡೆ ಮಾಡಲಿದೆ. ಅಲ್ಲಿಯವರೆಗೂ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.