ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಶೃಂಗೇರಿ ಶಾರದಾಂಬೆ ದೇಗುಲ ಮತ್ತು ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಸದ್ಯಕ್ಕೆ ಓಪನ್ ಆಗಲ್ಲ ಎಂದೂ ದೇವಸ್ಥಾನಗಳ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಶೃಂಗೇರಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಭಕ್ತರೂ ಬರುತ್ತಾರೆ. ಹೊರನಾಡು ದೇಗುಲಕ್ಕೂ ರಾಜ್ಯ, ಹೊರರಾಜ್ಯದ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ವೇಳೆ ಭಕ್ತರ ನಿಯಂತ್ರಣ ಕಷ್ಟಸಾಧ್ಯ. ಆದ್ದರಿಂದ ದೇವಾಲಯ ತೆರೆಯದಿರಲು ಆಡಳಿತ ಮಂಡಳಿ ಈ ತೀರ್ಮಾನಿಸಿದೆ.
ಜನರ ದರ್ಶನಕ್ಕೆ ದೇವಸ್ಥಾನಗಳನ್ನು ತೆರೆಯುವ ಬಗ್ಗೆ ಸದ್ಯದಲ್ಲೇ ತಿಳಿಸುವುದಾಗಿ ಆಡಳಿತ ಮಂಡಳಿ ಹೇಳಿದೆ.