ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ದಿನ 209 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,198ಕ್ಕೆ ಏರಿದೆ.
ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 79 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 6,591 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಚಿಕ್ಕಮಗಳೂರು 142, ಕಡೂರು 12, ತರೀಕೆರೆ 34, ಕೊಪ್ಪ 02, ಮೂಡಿಗೆರೆ 19 ಕೋವಿಡ್ ಪ್ರಕರಣ ಪತ್ತೆಯಾಗಿವೆ.
ಇಂದು ಕೊರೊನಾ ಒಬ್ಬರು ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 117 ಕ್ಕೆ ಏರಿಕೆಯಾಗಿದೆ. ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರವಹಿಸಿದೆ. ಜಿಲ್ಲೆಯಲ್ಲಿ ಒಟ್ಟು 1,411 ಸಕ್ರಿಯ ಪ್ರಕರಣಗಳಿವೆ.