ETV Bharat / state

ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಒಂದೇ ಗ್ರಾಮದ 128 ಜನರಿಗೆ ಕೊರೊನಾ - Indiranagar village in Chikkamagalur taluk

ಚಿಕ್ಕಮಗಳೂರು ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ನೂರಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

chikkamagalur
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಒಂದೇ ಗ್ರಾಮದ 128 ಜನರಿಗೆ ಕೊರೊನಾ
author img

By

Published : May 18, 2021, 10:52 AM IST

Updated : May 18, 2021, 12:54 PM IST

ಚಿಕ್ಕಮಗಳೂರು: ಒಂದೇ ಗ್ರಾಮದ 128 ಜನರಿಗೆ ಕೊರೊನಾ ಪಾಸಿಟಿವ್ ಬಂದ ಘಟನೆ ಚಿಕ್ಕಮಗಳೂರು ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ನಡೆದಿದೆ.

ಇಂದಿರಾನಗರ ಗ್ರಾಮದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಆಸ್ಪತ್ರೆಯವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮೃತದೇಹವನ್ನು ಹಸ್ತಾಂತರಿಸಿದ್ದರು. ನಾನ್ ಕೋವಿಡ್ ಡೆತ್ ಎಂದು ಮೃತನ ಅಂತ್ಯಕ್ರಿಯೆಯಲ್ಲಿ ಊರಿನ ಹಲವರು ಪಾಲ್ಗೊಂಡಿದ್ದರು. ಅಂತ್ಯಸಂಸ್ಕಾರ ಮಾಡಿ ಜನರು ಮನೆಗೆ ಮರಳುತ್ತಿದ್ದಂತೆ ಮೃತನ ಕೋವಿಡ್ ಟೆಸ್ಟ್ ವರದಿ ಪಾಸಿಟಿವ್ ಬಂದಿದ್ದು, ವರದಿ ನೋಡಿ ಜನರು ಕಂಗಾಲಾಗಿದ್ದರು. ಬಳಿಕ ಗ್ರಾಮದ ಜನರು ಕೂಡ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ. ಇದೀಗ ಅವರ ವರದಿ ಬಂದಿದ್ದು, 128 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸ್ಥಳಕ್ಕೆ ಎಸಿ, ತಹಶೀಲ್ದಾರ್, ಇಒ, ಪಿಡಿಒ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯದಿಂದ ಇರುವಂತೆ ಹೇಳಿದ್ದಾರೆ.

ಇಂದಿರಾನಗರ ಗ್ರಾಮಕ್ಕೆ ಸಿ.ಟಿ.ರವಿ ಭೇಟಿ

ಇಂದಿರಾನಗರ ಗ್ರಾಮದ 128 ಜನರಿಗೆ ಕೊರೊನಾ ಪಾಸಿಟಿವ್ ಬಂದ ಗ್ರಾಮವನ್ನು ಸೀಲ್ಡ್​​ಡೌನ್​ ಮಾಡಲಾಗಿದೆ. ಹೀಗಾಗಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಗ್ರಾಮಕ್ಕೆ ತೆರಳಿ 80 ಕುಟುಂಬಗಳಿಗೆ ಆಹಾರದ ಕಿಟ್​ ವಿತರಣೆ ಮಾಡಿದರು.

ಇಂದಿರಾನಗರ ಗ್ರಾಮಕ್ಕೆ ಸಿ.ಟಿ.ರವಿ ಭೇಟಿ

ಗ್ರಾಮದ ಪ್ರತಿಯೊಬ್ಬರ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು. ಜೊತೆಗೆ ಸೋಂಕಿನಿಂದ ಗುಣಮುಖರಾಗುವವರೆಗೂ ಯಾರೂ ಮನೆಯಿಂದ ಹೊರಬರಬೇಡಿ ಎಂದು ಸೂಚಿಸಿದರು.

ಇದನ್ನೂ ಓದಿ: ಆರೈಕೆ ಕೇಂದ್ರದಲ್ಲಿ ಅವ್ಯವಸ್ಥೆ: ವಿಡಿಯೋ ಮೂಲಕ ಅಳಲು ತೋಡಿಕೊಂಡ ಸೋಂಕಿತರು

Last Updated : May 18, 2021, 12:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.