ETV Bharat / state

ಸ್ಕಾರ್ಪಿಯೋ ಕಾರಿನಲ್ಲಿ ತುಂಬಿ ಸಿನಿಮಾ ಶೈಲಿಯಲ್ಲಿ ಹಸು ಕದ್ದೊಯ್ದ ಖದೀಮರು - ಚಿಕ್ಕಮಗಳೂರಿನ ಹೊರವಲಯದಲ್ಲಿ ಹಸು ಕಳ್ಳತನ

ಸ್ಕಾರ್ಪಿಯೋ ಕಾರಿನಲ್ಲಿ ಬಂದ ಖದೀಮರು ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು ಕದ್ದೊಯ್ದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ.

Cow theft in Chikkamagaluru
ಹಸು ಕದ್ದೊಯ್ಯುತ್ತಿರುವ ಸಿಸಿಟಿವಿ ದೃಶ್ಯ
author img

By

Published : Aug 17, 2020, 4:27 PM IST

ಚಿಕ್ಕಮಗಳೂರು : ಸ್ಕಾರ್ಪಿಯೋ ಕಾರಿನಲ್ಲಿ ಬಂದು ಸಿನಿಮಾ ಶೈಲಿಯಲ್ಲಿ ಖದೀಮರು ಹಸುವನ್ನು ಕದ್ದೊಯ್ದ ಘಟನೆ ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ.

ಮಧ್ಯರಾತ್ರಿ ಬಂದ ಖದೀಮರು ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು ಸ್ಕಾರ್ಪಿಯೋ ಕಾರಿನಲ್ಲಿ ತುಂಬಿ ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ ಕರು ಕಾರನ್ನು ಹಿಂಬಾಲಿಸಿ ಸ್ವಲ್ಪ ದೂರದವರೆಗೆ ಓಡಿದೆ. ಖದೀಮರು ಹಸುವನ್ನು ಕದ್ದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಸು ಕದ್ದೊಯ್ಯುತ್ತಿರುವ ಸಿಸಿಟಿವಿ ದೃಶ್ಯ

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.