ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ಸಹೋದರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ನಗರದಲ್ಲಿ ವತ್ಸಲಾ (40) ಸಾವನ್ನಪ್ಪಿದ್ದಾರೆ. ವತ್ಸಲಾ ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 10 ದಿನಗಳ ಹಿಂದೆ ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ (63) ಕೂಡ ಕೋವಿಡ್ನಿಂದ ಕೊನೆಯುಸಿರೆಳೆದಿದ್ದರು. ಈಗ ಸಹೋದರಿ ಕೂಡ ಕೊರೊನಾಗೆ ಬಲಿಯಾಗಿದ್ದು, ಇವರಿಬ್ಬರನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.
ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ವೇದಾ ಕೃಷ್ಣಮೂರ್ತಿ ತಾಯಿ: ಕೋವಿಡ್ ನಿಯಮಾವಳಿಯಂತೆ ಅಂತ್ಯಕ್ರಿಯೆ