ETV Bharat / state

ಚಿಕ್ಕಮಗಳೂರು ಜಿಲ್ಲೆಯಾದ್ಯಂತ 130 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿ ಪ್ರಗತಿ: ಸಿ. ಟಿ. ರವಿ

ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 130 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ. ಟಿ. ರವಿ ಹೇಳಿದ್ದಾರೆ.

Ct ravi inaugurated Hulikere road construction

author img

By

Published : Jun 23, 2020, 4:14 PM IST

ಚಿಕ್ಕಮಗಳೂರು: ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆ ಅಡಿಯಲ್ಲಿ ರೂ. 130 ಕೋಟಿಗೂ ಹೆಚ್ಚು ಅನುದಾನದಲ್ಲಿ ವಿವಿಧ ಕಾಮಗಾರಿಗಳು ಜಿಲ್ಲೆಯಲ್ಲಿ ಹಂತ-ಹಂತವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ. ಟಿ. ರವಿ ತಿಳಿಸಿದರು.

ಜನರ ಬಹು ದಿನಗಳ ಬೇಡಿಕೆಯಂತೆ ಕಡೂರು ತಾಲೂಕಿನ ಹುಲಿಕೆರೆ ಗ್ರಾಮದಿಂದ ಸ್ವಾಮಿಕಟ್ಟೆ ಹಾಗೂ ಕರಡಿಗವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆಯ ರೂ. 2 ಕೋಟಿ ಅನುದಾನದಲ್ಲಿ ಕಾಮಗಾರಿಗಿಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ಅಲ್ಲದೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ 130 ಕೋಟಿಗೂ ಅಧಿಕ ಅನುದಾನದಲ್ಲಿ ವಿವಿಧ ಯೋಜನೆ ಅಡಿ ವಿವಿಧ ಕೆಲಸಗಳನ್ನು ಕೈಗೊಳ್ಳಲಾಗಿದೆ. ಕೆಲವೊಂದು ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು, ಮತ್ತೆ ಕೆಲವು ಹಂತ-ಹಂತವಾಗಿ ಆರಂಭವಾಗುತ್ತಿವೆ ಎಂದು ತಿಳಿಸಿದರು.
ಕೋವಿಡ್-19 ನಿಂದಾಗಿ ಕೆಲವೊಂದು ರಸ್ತೆ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ. ಕಡೂರು ಹಾಗೂ ಚಿಕ್ಕಮಗಳೂರು ರಸ್ತೆ ನಿರ್ಮಾಣದ ಕಾಮಗಾರಿ ಕೆಲಸ ವೇಗ ಗತಿಯಲ್ಲಿ ಸಾಗುತ್ತಿದ್ದು, ಹುಲಿಕೆರೆ, ಹೊಸಹಳ್ಳಿ, ಬಾಣೂರು ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ 3 ಕೋಟಿ ರೂ. ಹಾಗೂ ಗುಬ್ಬಿಹಳ್ಳಿ ಮತ್ತು ಬ್ರಹ್ಮಸಮುದ್ರ ರಸ್ತೆಗೆ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.
ಸಖರಾಯಪಟ್ಟಣ ಹಾಗೂ ಟಿ.ಬಿ. ಕಾವಲು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸ್ಥಳೀಯರುಈ ವೇಳೆ ಒತ್ತಾಯಿಸಿದರು. ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಹಂತ-ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು. ಸಖರಾಯಪಟ್ಟಣದಲ್ಲಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಚಿವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.