ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದ್ದಾರೆ.
ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗೆ ಭೇಟಿ ನೀಡಿದ ಸಿ ಟಿ ರವಿ, ಸೋಂಕಿತರ ಯೋಗಕ್ಷೇಮ, ವೈದ್ಯರ ಸ್ಪಂದನೆ, ಊಟೋಪಚಾರದ ಬಗ್ಗೆ ವಿಚಾರಿಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿರುವ ಆಕ್ಸಿಜನ್, ವೆಂಟಿಲೇಟರ್ ಹಾಗೂ ಕೋವಿಡ್ ವಿಭಾಗದಲ್ಲಿನ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿದರು.
ಬಳಿಕ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಉತ್ತಮ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದರು.