ETV Bharat / state

ಸಿದ್ದರಾಮಯ್ಯನವರ ಬಾಯಲ್ಲಿ ಉಲ್ಟಾ ಮಚ್ಚೆಯಿದೆ: ಸಿ.ಟಿ.ರವಿ - CT Ravi slammed

ಸಿದ್ದರಾಮಯ್ಯ ಹೇಳಿದ್ದಕ್ಕೆ ತದ್ವಿರುದ್ಧವಾದದ್ದು ಆಗುತ್ತದೆ. ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

CT Ravi
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ
author img

By

Published : Aug 15, 2021, 3:32 PM IST

ಚಿಕ್ಕಮಗಳೂರು: ಸಿದ್ದರಾಮಯ್ಯ ಹೇಳಿದ್ದು ಉಲ್ಟಾ ಆಗುತ್ತದೆ. ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

ಸಿ.ಟಿ.ರವಿ ಹಾಗು ಟಿ.ಡಿ ರಾಜೇಗೌಡ ಹೇಳಿಕೆ.

ಸಿದ್ದರಾಮಯ್ಯನವರು ಕಾಲಜ್ಞಾನಿನಾ?, ಅಪ್ಪನಾಣೆ ಮೋದಿ ಪ್ರಧಾನಿ ಆಗಲ್ಲ ಎಂದಿದ್ದರು. ಆದರೆ ಮೋದಿ 2 ಬಾರಿ ಪ್ರಧಾನಿಯಾದರು. 2018ರಲ್ಲಿ ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇನೆ ಎಂದಿದ್ದರು, ಬಂದ್ರಾ?. ಅವರು ಹೇಳಿದ್ದಕ್ಕೆ ತದ್ವಿರುದ್ಧವಾದದ್ದು ಆಗುತ್ತದೆ. ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರೆ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಬಿಜೆಪಿ ಉಳಿಯಲ್ಲ ಅಂದ್ರೆ ಈ ಅವಧಿ ಮುಗಿಸಿ ಮತ್ತೆ ಮುಂದಿನ 5 ವರ್ಷಕ್ಕೂ ಬರುತ್ತದೆ ಎಂದು ಸಿ.ಟಿ ರವಿ ಹೇಳಿದರು.

'ಬಾಲಿಶತನದ ಹೇಳಿಕೆ ಶೋಭೆ ತರುವುದಿಲ್ಲ'

ಇನ್ನೊಂದೆಡೆ, ಬಾಲಿಶತನದ ಹೇಳಿಕೆ ಸಿ.ಟಿ ರವಿಗೆ ಶೋಭೆ ತರುವುದಿಲ್ಲ ಎಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ವಾಗ್ದಾಳಿ ನಡೆಸಿದ್ದಾರೆ.

ನೆಹರು ಹೆಸರಿನಲ್ಲಿ ‌ಹುಕ್ಕಾ ಬಾರ್ ತೆರೆಯಲಿ ಎಂಬ ಸಿ.ಟಿ ರವಿ ಅವರ ಇತ್ತೀಚೆಗಿನ ಹೇಳಿಕೆಗೆ ತಿರುಗೇಟು ನೀಡುತ್ತಾ, ಅವರು ರಾಜಕೀಯದಲ್ಲಿ ಇನ್ನೂ ಎತ್ತರಕ್ಕೆ ಬೆಳೆಯಬೇಕು. ಇಂತಹ ಸಣ್ಣತನದ ಹೇಳಿಕೆಗಳನ್ನು ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ಅವರಿಗೆ ಇತಿಹಾಸದ ಜ್ಞಾನವಿಲ್ಲ. ನೆಹರು, ಇಂದಿರಾ ಗಾಂಧಿಯ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕು. ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದರು.

ಇದನ್ನೂ ಓದಿ: 'ಸಿದ್ದರಾಮಯ್ಯ ಪ್ಲಾನ್ ಯಶಸ್ವಿಯಾಗಲಿಲ್ಲ, ಹಾಗಾಗಿ ಸರ್ಕಾರ ಅಲ್ಪಾವಧಿ ಎನ್ನುತ್ತಿದ್ದಾರೆ'​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.