ETV Bharat / state

ಸಿದ್ದರಾಮಯ್ಯ ಸುಳ್ಳು ರಾಮಯ್ಯ ಅಲ್ಲದಿದ್ದರೆ ಎಫ್‌ಸಿಐ ಕಮಿಟ್ಮೆಂಟ್ ಪತ್ರ ತೋರಿಸಲಿ: ಸಿಟಿ ರವಿ ವಾಗ್ದಾಳಿ - ಉಚಿತ ಅಕ್ಕಿ

ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ (ಎಫ್‌ಸಿಐ) ನೀಡಿದ ಕಮಿಟ್ಮೆಂಟ್ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ‌.ರವಿ ಸವಾಲು ಹಾಕಿದ್ದಾರೆ.

ct ravi
ಸಿದ್ದರಾಮಯ್ಯ ವಿರುದ್ಧ ಸಿ ಟಿ ರವಿ ವಾಗ್ದಾಳಿ
author img

By

Published : Jun 16, 2023, 8:56 AM IST

ಸಿದ್ದರಾಮಯ್ಯ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಚಿಕ್ಕಮಗಳೂರು : ಕೇಂದ್ರದ ಒಪ್ಪಿಗೆ ಆಧಾರದ ಮೇಲೆ ಜುಲೈ 1 ರಿಂದ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಬಳಿಕ ಕೇಂದ್ರ ಸರ್ಕಾರ ಉಲ್ಟಾ ಹೊಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಸುಳ್ಳು ರಾಮಯ್ಯ ಅಲ್ಲಾ ಎನ್ನುವುದಾದರೆ ಎಫ್‌ಸಿಐ ಕಮಿಟ್ಮೆಂಟ್ ಲೆಟರ್ ತೋರಿಸಲಿ ಎಂದು ಸವಾಲು ಹಾಕಿದರು.

ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ಆರೋಪದ ಕುರಿತು ಮಾತನಾಡಿದ ಮಾಜಿ ಶಾಸಕರು, "ಸುಮ್ಮನೆ ಆರೋಪ ಮಾಡುವುದನ್ನು ಬಿಟ್ಟು ಜನರಿಗೆ ಹಣ ಕೊಡಿ, ಅವರು ಅಕ್ಕಿ ತೆಗೆದುಕೊಳ್ಳುತ್ತಾರೆ. ನಾವು ನಿಮಗೆ ಅಕ್ಕಿ ಕಳಿಸುತ್ತೇವೆ, ನಿಮ್ಮ ಹೆಸರು ಹಾಕಿಕೊಂಡು ಕೊಡಿ ಅಂತಾ ಕೇಂದ್ರದಿಂದ ಪತ್ರ ಕಳಿಸಿಲ್ಲ. ಹಾಗಾದರೆ, ಸಿಎಂ ಸಿದ್ದರಾಮಯ್ಯ ಕಮಿಟ್ಮೆಂಟ್ ಪತ್ರ ತೋರಿಸಲಿ. ಎಫ್.ಸಿ.ಐ. ನಿಮಗೆ ಅಗತ್ಯವಿರುವ ಅಕ್ಕಿಯನ್ನು ಕಳಿಸುತ್ತೇವೆ ಎಂದು ಹೇಳಿದ್ದಾರಾ?. ತಮ್ಮ ಕೈಯ್ಯಲ್ಲಿ ಆಗದಿರುವುದಕ್ಕೆ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಈಗಲೇ ಶುರು ಮಾಡಿದ್ದೀರಾ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರು ನಾಲೈದು ತಿಂಗಳ ಬಳಿಕ ಆರೋಪ ಮಾಡುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ, ಆರೋಪ ಮಾಡುವುದನ್ನು ಈಗಲೇ ಶುರು ಮಾಡಿದ್ದಾರೆ. ಜುಲೈ 1 ರಿಂದ ಉಚಿತ ಅಕ್ಕಿ ಎಂದು ಭಾಷಣ ಮಾಡಿ ಈಗ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದೀರಾ?. ನೀವು ಎಲ್ಲ ಬಿ.ಪಿ.ಎಲ್. ಕಾರ್ಡ್​ದಾರರ ಖಾತೆಗೆ ಹಣ ಹಾಕಿ, ಅವರೇ ಅಕ್ಕಿ ಕೊಂಡುಕೊಳ್ಳುತ್ತಾರೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ : Congress Guarantee Scheme: ಅನ್ನಭಾಗ್ಯ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

"ಆಕಾಶವೇನು ಕಳಚಿ ಬಿದ್ದಿಲ್ಲ, ಹಣ ಕೊಟ್ಟರೆ ಅಕ್ಕಿ ಸಿಗುತ್ತದೆ. ಮೊದಲು ಹಣ ಹಾಕಿ, ಆಮೇಲೆ ಮಾತಾಡಿ, ಹಾಗೆಯೇ ಕೊಟ್ಟರೆ ನಾನು ಕೊಟ್ಟೆ ಅನ್ನೋದು, ಕೊಡದಿದ್ದರೆ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಇವರ ಕೆಲಸವಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

"ಕೊಟ್ಟಿದ್ದು ಭಯಂಕರ ಸೌಂಡ್, ಕಿತ್ತಿಕೊಂಡಿದ್ದು ಸೌಂಡ್ ಲೆಸ್. ಕಿತ್ತುಕೊಂಡಿದ್ದು ಯಾರಿಗೂ ಗೊತ್ತೇ ಆಗದಂತೆ ನೋಡಿಕೊಳ್ಳುವುದು. ಏನನ್ನೂ ಕೇಳದೆ ವಿದ್ಯುತ್ ಶಕ್ತಿ ದರ ಏರಿಸಿದ್ದಾರೆ. ಕೆ.ಇ.ಆರ್.ಸಿ ತೀರ್ಮಾನ ಹಿಂದಿನ ಸರ್ಕಾರವೇ ಮಾಡಿತ್ತು ಎನ್ನುತ್ತಿದ್ದಾರೆ. ಆದರೆ, ಹಿಂದೆ-ಮುಂದೆ ನೋಡದೆ ಒಪ್ಪಿಗೆ ಕೊಟ್ಟವರು ಇವರು.

ಕೆಇಆರ್​ಸಿ ಇಂತಹ ಪ್ರಸ್ತಾವನೆಯನ್ನು ಬಿಜೆಪಿ ಸರ್ಕಾರದ ಮುಂದಿಟ್ಟಿತ್ತು. ಬಿಜೆಪಿ ಸರ್ಕಾರ ಅದಕ್ಕೆ ಅನುಮತಿ ನೀಡಿರಲಿಲ್ಲ, ಅನುಮತಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ. ಸದ್ದಿಲ್ಲದೆ ಲಿಕ್ಕರ್ ಮೇಲೆ 20 ರೂಪಾಯಿ ಜಾಸ್ತಿ ಮಾಡಿದ್ದಾರೆ. ಅದಕ್ಕೂ ಕೇಂದ್ರ ಸರ್ಕಾರವೇ ಕಾರಣನಾ?, ರಿಜಿಸ್ಟ್ರೇಷನ್ ಶುಲ್ಕ, ಮೋಟಾರ್ ವಾಹನದ ಮೇಲಿನ ದರ ಹೆಚ್ಚಿಸಲು ಮುಂದಾಗಿದ್ದಾರಂತೆ. ಒಂದು ಕಡೆ ಕಿತ್ತಿಕೊಳ್ಳುವುದು, ಮತ್ತೊಂದು ಕಡೆ ಕೊಟ್ಟಂತೆ ಮಾಡುವುದು ಕಾಂಗ್ರೆಸ್​ ಸರ್ಕಾರದ ಕೆಲಸ" ಎಂದು ಮಾಜಿ ಶಾಸಕ ಸಿ ಟಿ ರವಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : Guarantee scheme: ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.