ಚಿಕ್ಕಮಗಳೂರು: ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಂತರ ಸಿ.ಟಿ.ರವಿ ಮೊದಲ ಬಾರಿಗೆ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶೃಂಗೇರಿಯ ಶಾರದಾಂಬೆ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿರುವ ಸಿ.ಟಿ.ರವಿ, ಶಾರದಾಂಬೆಯ ದರ್ಶನ ಪಡೆದು ನಂತರ ವಿಶೇಷ ಪೂಜೆ ಸಲ್ಲಿಸಿದರು.
ನಂತರ ನರಸಿಂಹ ವನದಲ್ಲಿರುವ ಗುರು ನಿವಾಸಕ್ಕೆ ತೆರಳಿ ಶ್ರೀ ಜಗದ್ಗುರು ಭಾರತಿ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ನಂತರ ಕುಟುಂಬದ ಎಲ್ಲಾ ಸದಸ್ಯರು ಶಾರದಾ ಪೀಠದಲ್ಲಿರುವ ಗೋ ಶಾಲೆಗೆ ಭೇಟಿ ನೀಡಿದ್ದಾರೆ.
ಓದಿ...ರೈತ ಭವನ ಕಟ್ಟಡದ ಮೇಲೇರಿ ಮಾಜಿ ಅಧ್ಯಕ್ಷನ ಆತ್ಮಹತ್ಯೆ ಹೈಡ್ರಾಮಾ!