ಚಿಕ್ಕಮಗಳೂರು: ಶಾಸಕ ಸಿ.ಟಿ.ರವಿ ಅವರು ಸಿದ್ದರಾಮಯ್ಯ 75ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದು, ದೇವರು ಆಯಸ್ಸು-ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಆಶಿಸಿದ್ದಾರೆ. ಇದೇ ವೇಳೆ, ಎರಡ್ಮೂರು ದಿನದ ಮಳೆಗೆ 13 ಜನ ಅಕಾಲಿಕ ಮೃತ್ಯುಗೀಡಾಗಿದ್ದಾರೆ. ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ?. ಕಾಂಗ್ರೆಸ್ ಸಂವೇದನಾಶೀಲತೆ ಕಳೆದುಕೊಂಡಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರೆಲ್ಲಾ ಬಂದಿದ್ದಾರೆ. ಸಂಕಷ್ಟದಲ್ಲಿದ್ದಾಗ ಹಾಡಿ-ಹೊಗಳೋದು ಮಾನವೀಯತೆ ಇರುವವರಿಗೆ ಶೋಭೆ ತರೋದಲ್ಲ. ಬಿಜೆಪಿ ಸರ್ಕಾರವೂ 3 ವರ್ಷದ ತುಂಬಿದ್ದಕ್ಕೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕರ್ತ ಪ್ರವೀಣ್ ಸಾವನ್ನಪ್ಪಿದ್ದಕ್ಕೆ ಎಲ್ಲರೂ ಒಮ್ಮತದ ನಿರ್ಧಾರ ಮಾಡಿ ರದ್ದು ಮಾಡಿದ್ವಿ. ಇಂದು ಸೂತಕದ ಮನೆಯಲ್ಲಿ ಸಂಭ್ರಮ ಅಂತ ಕೆಲವರಿಗಾದರೂ ಅನ್ನಿಸಬೇಕಿತ್ತು ಎಂದು ಹೇಳಿದರು.
ಇದನ್ನೂ ಓದಿ: ಮೀಸಲು ಸೌಲಭ್ಯ ಹೆಚ್ಚಳಕ್ಕೆ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಧರಣಿ.. ಮನವೊಲಿಸಿದ ಹೆಚ್ಡಿಕೆ