ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಳಿ ಪೊಲೀಸ್ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಧರ್ಮಸ್ಥಳ, ಉಜಿರೆ, ಮಂಗಳೂರು, ಉಡುಪಿ, ಕಾರ್ಕಳ ಭಾಗದಿಂದ ಬರುವಂತಹ ಪ್ರತಿಯೊಂದು ವಾಹನಗಳ ನೋಂದಣಿ ಸಂಖ್ಯೆ, ವಿಳಾಸ ಹಾಗೂ ಸಂಪೂರ್ಣ ದಾಖಲಾತಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಓದಿ: ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆ ಪ್ರವಾಸಿ ತಾಣಗಳ ಭೇಟಿಗೆ ಸಂಪೂರ್ಣ ನಿಷೇಧ
ನಾಳೆಯಿಂದ ಮೂರು ದಿನಗಳ ಕಾಲ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದು, ಯಾವುದೇ ರೀತಿಯ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರಮುಖವಾಗಿ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.