ಚಿಕ್ಕಮಗಳೂರು: ಶ್ರೀರಾಮಸೇನೆಯ ವತಿಯಿಂದ ಇಂದು ದತ್ತಮಾಲಾ ಅಭಿಯಾನದ ಶೋಭಾಯಾತ್ರೆ ಮತ್ತು ದತ್ತ ಪಾದುಕೆ ದರ್ಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಕಳೆದ ಏಳು ದಿನಗಳಿಂದ ಮಾಲೆ ಧರಿಸಿ ವೃತ್ತದಲ್ಲಿದ್ದ ಶ್ರೀರಾಮಸೇನೆಯ ದತ್ತ ಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ 9 ಗಂಟೆಯ ಸುಮಾರಿಗೆ ನಗರದ ಶಂಕರಮಠದಲ್ಲಿ ಬಹಿರಂಗ ಸಮಾವೇಶ ನಡೆಸಿ ಧರ್ಮಭಾಷಣ ನಡೆಯಲಿದೆ. ಸುಮಾರು ಐದು ಸಾವಿರ ದತ್ತ ಮಾಲಾಧಾರಿಗಳು ಶಂಕರ ಮಠದಿಂದ ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆಯಲ್ಲಿ ಬೃಹತ್ ಶೋಭಾಯಾತ್ರೆ ನಡೆಸುವರು. ಆಜಾದ್ ಪಾರ್ಕ್‍ನಲ್ಲಿ ಶೋಭಾಯಾತ್ರೆ ಕೊನೆಗೊಂಡ ಬಳಿಕ ದತ್ತ ಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಮಾಡಲಿದ್ದಾರೆ.
ಇದನ್ನೂ ಓದಿ: ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಆಗಲೇಬೇಕು: ಗಂಗಾಧರ್ ಕುಲಕರ್ಣಿ
ಎಸ್.ಪಿ. ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಮೂವರು ಡಿವೈಎಸ್ಪಿ, 18 ಸಿಪಿಐ, 67 ಪಿಎಸ್ಐ, 147 ಎಎಸ್‍ಐ, 851 ಸಿಹೆಚ್‍ಸಿ ಮತ್ತು ಸಿಪಿಸಿ ಹಾಗೂ 200 ಹೋಮ್ ಗಾರ್ಡ್‍ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಇದನ್ನೂ ಓದಿ:ಅದ್ಧೂರಿಯಾಗಿ ಜರುಗಿದ ದತ್ತಮಾಲಾ ಶೋಭಾಯಾತ್ರೆ : ಹತ್ತು ಸಾವಿರಕ್ಕೂ ಅಧಿಕ ಭಕ್ತರು ಭಾಗಿ
ಹೊರ ಜಿಲ್ಲೆಗಳಿಂದ ಆಗಮಿಸುವ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, 26 ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 10 ಗಂಟೆಯವರೆಗೆ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧವಿದೆ.