ETV Bharat / state

ಚಿಕ್ಕಮಗಳೂರು: ಶ್ರೀರಾಮ ಸೇನೆ ವತಿಯಿಂದ ದತ್ತಮಾಲಾ ಅಭಿಯಾನ; ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರಿನಲ್ಲಿ ಶ್ರೀರಾಮ ಸೇನೆ ವತಿಯಿಂದ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ.

ಚಿಕ್ಕಮಗಳೂರು
ಚಿಕ್ಕಮಗಳೂರು
author img

By ETV Bharat Karnataka Team

Published : Oct 27, 2023, 8:15 PM IST

ಚಿಕ್ಕಮಗಳೂರು: ಶ್ರೀರಾಮ ಸೇನೆ ಅ.30 ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ ನವೆಂಬರ್ 4 ರ ಬೆಳಗ್ಗೆ 6 ರಿಂದ ನವೆಂಬರ್ 6ರ ಬೆಳಿಗ್ಗೆ 10ರವರೆಗೆ ನಿಷೇಧ ಹೇರಲಾಗಿದೆ. ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನ ಹಳ್ಳ, ಮಾಣಿಕ್ಯಧಾರ, ಗಾಳಿಕೆರೆಗೆ ಪ್ರವೇಶ ಇರುವುದಿಲ್ಲ.

ಜಿಲ್ಲೆಗೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಜಿಲ್ಲೆಗೆ ಬರುವ ಪ್ರವಾಸಿಗರಿಗೆ ನಿರ್ಬಂಧ

ನವೆಂಬರ್ ಮೊದಲ ವಾರಂತ್ಯ ಮುಳ್ಳಯ್ಯನಗಿರಿ ಭಾಗಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಹೀಗಾಗಿ, ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಡಿಸಿ ಹಾಗು ಎಸ್ಪಿ ಈ ಆದೇಶ ಮಾಡಿದ್ದಾರೆ. ಅ.30 ರಂದು ರಾಜ್ಯಾದ್ಯಂತ ದತ್ತ ಭಕ್ತರು ದತ್ತಮಾಲೆ ಧರಿಸುವರು.

ಅದೇ ದಿನ ಚಿಕ್ಕಮಗಳೂರಿನ ಶಂಕರ ಮಠದಲ್ಲಿ ಮಾಲಾಧಾರಣೆ ನಡೆಯಲಿದೆ. ನ.2 ರಂದು ದತ್ತ ದೀಪೋತ್ಸವ, ನ. 4 ರಂದು ಪಡಿ ಸಂಗ್ರಹ ಮಾಡಲಾಗುವುದು ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು. ನವೆಂಬರ್ 5 ರಂದು ಶೋಭಾಯಾತ್ರೆ ನಡೆಯಲಿದೆ. ಬಳಿಕ ಇದೇ ಸ್ಥಳದಲ್ಲಿ ಧರ್ಮಸಭೆ ನಡೆಸಿ ದತ್ತಪೀಠಕ್ಕೆ ತೆರಳಿ, ದತ್ತ ಪಾದುಕೆಗಳ ದರ್ಶನ ಪಡೆದ ನಂತರ, ಹೋಮ-ಹವನ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲೂ ಮಹಿಷ ದಸರಾ: ಇಂದಿನಿಂದ ಅಕ್ಟೋಬರ್ 24ರ ವರೆಗೆ ನಿಷೇಧಾಜ್ಞೆ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.