ಚಿಕ್ಕಮಗಳೂರು : ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಕಾರ್ಯಕ್ರಮದ ಹಿನ್ನಲೆ ಶ್ರೀ ದತ್ತಾತ್ರೇಯ ಬಾಬಾ ಬುಡನ್ ಗಿರಿಯಲ್ಲಿ ದತ್ತಾ ಪಾದುಕೆ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿಕೊಟ್ಟಿದೆ. .
ದತ್ತಾ ಪೀಠಕ್ಕೆ ಬರುವಂತಹ ಭಕ್ತರಿಗೆ ಯಾವುದೇ ರೀತಿಯಾ ತೊಂದರೆ ಆಗಬಾರದೆಂದು ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವೈದ್ಯಕೀಯ ಸೇವೆ, ರಸ್ತೆ ದುರಸ್ಥಿ ಸೇರಿದಂತೆ ಇತರೆ ಸೌಕರ್ಯಗಳನ್ನು ಚಿಕ್ಕಮಗಳೂರು ಜಿಲ್ಲಾಡಳಿತ ದತ್ತ ಭಕ್ತರಿಗೆ ಮಾಡಿದೆ. ಇನ್ನು ದತ್ತಪೀಠದ ಸುತ್ತಮುತ್ತಲಿನ ಆವರಣದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ.
ಗುಹೆಯ ಒಳ ಭಾಗದಲ್ಲಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.