ಚಿಕ್ಕಮಗಳೂರು: ಕಳೆದ ನಾಲ್ಕು ದಿನಗಳ ಹಿಂದೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಮಹಾ ಮಳೆಗೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಪ್ರಕರಣ ಇಂದು ನಡೆದಿದೆ.
ತಾಲೂಕಿನ ಮಲ್ಲಂದೂರು ಬಳಿ ಈ ಘಟನೆ ನಡೆದಿದೆ. ಮುಳ್ಳಯ್ಯ (52) ಮೃತ ವ್ಯಕ್ತಿ. 50 ಮೀಟರ್ ಹಗ್ಗವನ್ನು ಬಳಸಿ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಸಿಬ್ಬಂದಿ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಮಹಾಮಳೆಯಿಂದಾಗಿ ಹಳ್ಳದಲ್ಲಿ ನೀರು ಹೆಚ್ಚಾಗಿತ್ತು. ಆಗ ನದಿ ದಾಟಲು ಹೋದ ವ್ಯಕ್ತಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ. ಇಂದು ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ಕುರಿತು ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಕೇಂದ್ರದಿಂದ ಮೂವರು ವೀಕ್ಷಕರ ತಂಡ ರಾಜ್ಯಕ್ಕೆ ಆಗಮನ: ನಾಳೆ ಮಧ್ಯಾಹ್ನದ ವೇಳೆಗೆ ಮುಂದಿನ ಸಿಎಂ ಘೋಷಣೆ