ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಗೌಡಹಳ್ಳಿಯಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಅಕ್ಟೋಬರ್ 8ರಂದು ರೈತರೊಬ್ಬರ ಗದ್ದೆಗೆ ನುಗ್ಗಿದ 3 ಕಾಡಾನೆಗಳು ಸಂಪೂರ್ಣ ಬೆಳೆ ನಾಶ ಮಾಡಿವೆ.
ರಾತ್ರಿಯಿಂದ ಗ್ರಾಮದಲ್ಲಿ ಬೀಡು ಬಿಟ್ಟಿವೆ. ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಅನಾಹುತಗಳು ಸಂಭವಿಸುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಗಳು ಮಾತ್ರ ಇತ್ತ ಸುಳಿದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೀಘ್ರವೇ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಸ್ಥಳಾಂತರಿಸಿ ಸ್ಥಳೀಯ ನಿವಾಸಿಗಳ ಬೆಳೆ ಹಾನಿ ಜತೆಗೆ ಜೀವವನ್ನು ಕಾಪಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.