ETV Bharat / state

ಬಡವರು,ಕೂಲಿ ಕಾರ್ಮಿಕರಿಗೆ ಪಡಿತರ ವಿತರಣೆಯಲ್ಲಿ ವಿಳಂಬ: ಎಂ.ಪಿ.ಕುಮಾರಸ್ವಾಮಿ - M P. Kumaraswamy

ಪಡಿತರ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಕಾರಣಕ್ಕಾಗಿ ಜನರಿಗೆ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ನೀಡಲಾಗುತ್ತಿದೆ. ಆದರೆ ಮೂಡಿಗೆರೆ ಕ್ಷೇತ್ರದಲ್ಲಿ ಜನರಿಗೆ ಸರಿಯಾಗಿ ಪಡಿತರ ಸಿಗುತ್ತಿಲ್ಲ. ಈ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ ಎಂದು ಎಂ.ಪಿ.ಕುಮಾರಸ್ವಾಮಿ ತಿಳಿಸಿದ್ದಾರೆ.

kumaraswamy
ಎಂ. ಪಿ. ಕುಮಾರಸ್ವಾಮಿ
author img

By

Published : Apr 6, 2020, 7:11 PM IST

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಪಡಿತರ ವಿತರಣೆಯಲ್ಲಿ ತೊಂದರೆ ಆಗುತ್ತಿದೆ ಎಂದು ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಕ್ಷೇತ್ರದ ಅನೇಕ ಭಾಗಗಳಲ್ಲಿ ಸರಿಯಾದ ರೀತಿಯಲ್ಲಿ ಪಡಿತರ ವಿತರಣೆಯಾಗುತ್ತಿಲ್ಲ. ನಾನೇ ಖುದ್ದಾಗಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಸಮಸ್ಯೆಯನ್ನು ನೋಡಿದ್ದೇನೆ. ಈ ವೇಳೆ ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಪಡಿತರ ವಿತರಿಸುವಂತೆ ಸೂಚಿಸಿದ್ದೇನೆ. ಕಂಪ್ಯೂಟರ್ ಹಾಗೂ ಸರ್ವರ್ ಸಮಸ್ಯೆಯಿಂದ ವಿಳಂಬವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ವೈರಸ್ ವಿರುದ್ಧ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಅವರು ಜನರಲ್ಲಿ ಮನವಿ ಮಾಡಿದರು.

ಬಿಜೆಪಿ ಸಂಸ್ಥಾಪನಾ ದಿನ ಹಿನ್ನೆಲೆ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಒಂದು ಹೊತ್ತಿನ ಊಟ ಬಿಡಲು ಆದೇಶಿಸಿದ್ದಾರೆ. ನಾನು ಕೂಡ ಒಂದು ಹೊತ್ತಿನ ಊಟ ಬಿಟ್ಟು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಿಗೆ ಬೆಂಬಲ ಸೂಚಿಸುತ್ತೇನೆ ಎಂದು ಎಂ. ಪಿ. ಕುಮಾರಸ್ವಾಮಿ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.