ಚಿಕ್ಕಮಗಳೂರು: ಜಿಲ್ಲಾ ಉತ್ಸವದ ಅಂಗವಾಗಿ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ವಸ್ತು ಪ್ರದರ್ಶನವನ್ನು ಆಯೋಜನೆ ಮಾಡಿದ್ದು, ಸರ್ಕಾರದ ವಿವಿಧ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
ಪ್ರಮುಖವಾಗಿ ತೋಟಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತು ಪ್ರದರ್ಶನಕ್ಕೆ ಸಾರ್ವಜನಿಕರನ್ನು ಆಕರ್ಷಿಸಲು ವಿವಿಧ ಬಗೆಯ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಜನಪದ ಕಲಾ ಮಾದರಿಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿವಿಧ ಮಹಿಳಾ ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಮಹಿಳೆಯರು ತಯಾರಿಸಿದ ತಿನಿಸುಗಳು, ಕೈಯಲ್ಲಿ ಹೆಣೆದಿರುವ ಸ್ವೆಟರ್, ಕ್ರಿಯಾತ್ಮಕವಾಗಿ ತಯಾರಿಸಿದ ಗೃಹೋಪಯೋಗಿ ವಸ್ತುಗಳ ಪ್ರದರ್ಶನವನ್ನು ಸಹ ಇಲ್ಲಿ ಆಯೋಜನೆ ಮಾಡಲಾಗಿದೆ.