ಚಿಕ್ಕಮಗಳೂರು: ರಾಜ್ಯಾದ್ಯಂತ ಕೋವಿಡ್ ಸೆಂಟರ್ಗಳಲ್ಲಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಹಾಡುವುದು ಹಾಗೂ ನೃತ್ಯ ಮಾಡುವುದು ಈಗ ಸರ್ವೇ ಸಾಮಾನ್ಯವಾಗಿದೆ.
ಅದೇ ರೀತಿ ಚಿಕ್ಕಮಗಳೂರಿನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ, ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರು ಕೊರೊನಾ ಸೋಂಕಿತರ ಮುಂದೆ ಸಿನಿಮಾ ಹಾಡುಗಳನ್ನು ಹಾಡಿ ನೃತ್ಯ ಮಾಡಿ ಅವರಲ್ಲಿ ಉತ್ಸಾಹ ತುಂಬಿದ್ದಾರೆ.