ಚಿಕ್ಕಮಗಳೂರು: ತಂದೆಯೊಬ್ಬ ತನ್ನ ಮಗುವನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ತಂದೆಯೊಬ್ಬ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ, ಪುಟ್ಟ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಘಟನೆ ಕಡೂರು ನಗರದ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ.
ತಂದೆ ವಕೀಲ ಉಮಾಶಂಕರ್ ಎಂಟು ತಿಂಗಳ ಹೆಣ್ಣು ಮಗುವಿಗೆ ಪ್ಲಾಸ್ಟರ್ ಹಾಕಿ ಬಕೆಟ್ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ.
ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಉಮಾಶಂಕರ್ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.