ETV Bharat / state

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ : ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

author img

By

Published : Dec 12, 2020, 2:01 PM IST

ಕಸ್ತೂರಿ ರಂಗನ್ ವರದಿ, ಹುಲಿ ಬಫರ್ ಝೋನ್ ವಿರೋಧಿಸಿ ಈ ಚುನಾವಣೆ ಬಹಿಷ್ಕಾರ ಮಾಡಲಾಗಿದೆ. ನಾಮಪತ್ರ ಸಲ್ಲಿಸದೆ ಸರ್ಕಾರದ ವಿರುದ್ಧ ಈ ಭಾಗದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ..

Chikkamagaluru
ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ಮಲೆನಾಡು ಭಾಗದ ಹಲವಾರು ಗ್ರಾಮ ಪಂಚಾಯತ್‌ಗಳಲ್ಲಿ ಚುನಾವಣೆ ಬಹಿಷ್ಕಾರ ಮಾಡಲಾಗಿತ್ತು. ಈ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 10 ಗ್ರಾಮ ಪಂಚಾಯತ್‌ನಲ್ಲಿ ನಾಮಪತ್ರ ಸಲ್ಲಿಕೆಯಾಗಿಲ್ಲ.

Chikkamagaluru
ಜಿಲ್ಲೆಯ 10 ಗ್ರಾಮ ಪಂಚಾಯತ್‌ನಲ್ಲಿ ನಾಮಪತ್ರ ಸಲ್ಲಿಕೆಯಾಗಿಲ್ಲ..

ಜಿಲ್ಲೆಯ 10 ಗ್ರಾಮ ಪಂಚಾಯತ್‌ಗಳಲ್ಲಿ ಚುನಾವಣಾ ಬಹಿಷ್ಕಾರ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ 6 ಗ್ರಾಪಂ, ಎನ್‌ಆರ್‌ಪುರ ತಾಲೂಕಿನ 3, ಮೂಡಿಗೆರೆ 1 ಗ್ರಾಪಂನಲ್ಲಿ ಈಗಾಗಲೇ ಚುನಾವಣೆ ಬಹಿಷ್ಕಾರಿಸಲಾಗಿದೆ.

ಕಸ್ತೂರಿ ರಂಗನ್ ವರದಿ, ಹುಲಿ ಬಫರ್ ಝೋನ್ ವಿರೋಧಿಸಿ ಈ ಚುನಾವಣೆ ಬಹಿಷ್ಕಾರ ಮಾಡಲಾಗಿದೆ. ನಾಮಪತ್ರ ಸಲ್ಲಿಸದೆ ಸರ್ಕಾರದ ವಿರುದ್ಧ ಈ ಭಾಗದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓದಿ: ಚಿಕ್ಕಮಗಳೂರು: ಗ್ರಾಮಸ್ಥರಿಂದ ಗ್ರಾ.ಪಂ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಜಿಲ್ಲೆಯಲ್ಲಿ ಒಂದೇ ಹಂತದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ನಡೆಯಲಿದೆ. ಡಿ. 22ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ನಿನ್ನೆ ಕೊನೆ ದಿನವಾಗಿತ್ತು. ಆದರೂ ಈ ಗ್ರಾಮ ಪಂಚಾಯತ್‌ಗಳಲ್ಲಿ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದೆ ಚುನಾವಣೆ ಬಹಿಷ್ಕರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.