ಚಿಕ್ಕಮಗಳೂರು : ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಾಳಿಪೂಜೆ ಗ್ರಾಮದಲ್ಲಿ ನಡೆದಿದೆ.
ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿದೆ. ಅಕ್ರಮವಾಗಿ ಜಮೀನಿಗೆ ಮಾಲೀಕ ವಿದ್ಯುತ್ ಅಳವಡಿಸಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಜಮೀನಿನ ಮಾಲೀಕನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ನಿಧಿಗಾಗಿ ಅಮ್ಮ ಬಲಿ ಕೊಡಲು ಮುಂದಾಗಿದ್ದಾಳೆ, ರಕ್ಷಣೆ ಕೊಡಿ: ಪೊಲೀಸರ ಮೊರೆ ಹೋದ ಮಗಳು!