ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಕಾಡು ಕೋಣ ಸ್ಥಳದಲ್ಲಿಯೇ ಮೃತಪಟ್ಟಿದೆ.
ಕಾಡುಕೋಣ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಈ ದುರ್ಘಟನೆ ನಡೆದಿದೆ. ಒಂದೂವರೆ ತಿಂಗಳ ಹಿಂದೆಯೂ ವಿದ್ಯುತ್ ತಂತಿ ತಗುಲಿ ಒಂದು ಕಾಡುಕೋಣ ಮೃತಪಟ್ಟಿತ್ತು. ಪದೇ ಪದೆ ಈ ರೀತಿಯ ಅವಘಡ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಸಿಬ್ಬಂದಿ ಎಚ್ಚೆತ್ತುಕೊಂಡಿಲ್ಲ.
ವಿದ್ಯುತ್ ಲೈನ್ ದುರಸ್ತಿ ಮಾಡಿ ಸಾರ್ವಜನಿಕರ ಹಾಗೂ ಕಾಡು ಪ್ರಾಣಿಗಳ ಜೀವ ರಕ್ಷಣೆ ಮಾಡಬೇಕು ಎಂದು ಸ್ಥಳೀಯರು ಅಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೊಪ್ಪ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.