ETV Bharat / state

ವಿದ್ಯುತ್​ ತಂತಿ ತುಳಿದು ಯುವಕ ಸಾವು... ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ! - Chikkamagaluru latest news

ಚಿಕ್ಕಮಗಳೂರಿನ ಚಕಮಕ್ಕಿಯಲ್ಲಿ ಗದ್ದೆಗೆ ಹೋಗುವ ಸಂದರ್ಭದಲ್ಲಿ ವಿದ್ಯುತ್ ತಂತಿ ತುಳಿದು ಯುವಕ ಮೃತಪಟ್ಟಿದ್ದು, ಬಣಕಲ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

electric-wire-crashes-young-man-dies
author img

By

Published : Oct 17, 2019, 4:50 PM IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕಮಕ್ಕಿಯಲ್ಲಿ ಜಮೀನಿಗೆ ಹೋಗುವ ಸಮಯದಲ್ಲಿ ವಿದ್ಯುತ್ ತಂತಿ ತುಳಿದು ಯುವಕಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಜುನಾಥ್ (25) ಮೃತ ದುರ್ದೈವಿ. ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ವಿದ್ಯುತ್​ ತಂತಿಗಳು ತುಂಡಾಗಿ ನೆಲಕ್ಕೆ ಬಿದ್ದಿದ್ದವು. ತಂತಿ ಬಿದ್ದು ಹಲವು ದಿನಗಳಾದರೂ ಅಧಿಕಾರಿಗಳು ತೆರವು ಮಾಡಿರಲಿಲ್ಲ.

ಮೃತ ಯುವಕ

ತಂತಿ ಬಿದ್ದಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೆ, ಯಾರೋ ಮತ್ತೆ ವಿದ್ಯುತ್​ ಆನ್​ ಮಾಡಿದ್ದಾರೆ. ಹೀಗಾಗಿ ಈ ದುರ್ಘಟನೆ ನಡೆದಿದೆ. ಹಲವು ದಿನಗಳು ಕಳೆದರೂ ಅದನ್ನು ತೆರವುಗೊಳಿಸದ ಮೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Kn_Ckm_04_Power shock_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕಮಕ್ಕಿಯಲ್ಲಿ ಈ ಘಟನೆ ನಡೆದಿದ್ದು ಮಂಜುನಾಥ್ (25) ಮೃತ ಯುವಕನಾಗಿದ್ದಾನೆ. ಗದ್ದೆಗೆ ಹೋಗುವ ವೇಳೆಯಲ್ಲಿ ಈ ಘಟನೆ ನಡೆದಿದ್ದು. ಕಳೆದ ದಿನಗಳ ಹಿಂದೇ ಈ ಭಾಗದಲ್ಲಿ ಸುರಿದ ಧಾರಕಾರ ಮಳೆಯಿಂದಾ ವಿದ್ಯುತ್ ತಂತಿಗಳು ತುಂಡಾಗಿ ಕೆಳಗೆ ಬಿದ್ದಿದ್ದವು. ಈ ತಂತಿಯಲ್ಲಿ ವಿದ್ಯುತ್ ಆಫ್ ಕೂಡ ಮಾಡಲಾಗಿತ್ತು.ಇಲ್ಲಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದು ಸಾಕಷ್ಟು ದಿನಗಳೇ ಕಳೆದಿದ್ದರೂ ಅಧಿಕಾರಿಗಳ ಬೇಜಾವದ್ದಾರಿಯಿಂದಾಗಿ ಈ ಘಟನೆ ನಡೆದಿದೆ. ತಂತಿ ಬಿದ್ದ ದಿನದಿಂದಾ ಈ ಲೈನ್ ನಲ್ಲಿ ವಿದ್ಯುತ್ ಆಫ್ ಮಾಡಲಾಗಿತ್ತು ಆದರೇ ಇಂದೂ ಯಾರೋ ಏಕಾ ಏಕೀ ವಿದ್ಯುತ್ ಆನ್ ಮಾಡಿದ್ದಾಗ ಈ ಘಟನೆ ನಡೆದಿದ್ದು ಸ್ಥಳೀಯರು ಮೆಸ್ಕಾಂ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಣಕಲ್ ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.....

Conclusion:ರಾಜಕುಮಾರ್......
ಈ ಟಿವಿ ಭಾರತ್.....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.