ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಳಿ ಮುಂದುವರೆದಿದ್ದು, ಪ್ರತಿನಿತ್ಯ ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ.
ಮೂಡಿಗೆರೆ ತಾಲೂಕಿನ ಕೆಂಜಿಗೆ, ಬಾಳೆಹಳ್ಳಿ, ಬಾನಳ್ಳಿ, ಬೆಳಗೋಡು, ಊರುಬಗೆ, ಗೌವನಹಳ್ಳಿ, ಕುಂಬಾರಡ್ಡಿ, ಕಿರುಗುಂದ ಆಲೇಖಾನ್ ಹೊರಟ್ಟಿ, ಭಾಗದಲ್ಲಿ 11 ಕಾಡಾನೆಗಳು ನಿರಂತರವಾಗಿ ದಾಳಿ ಮಾಡುತ್ತಿವೆ.
ಕಿರುಗುಂದ ಗ್ರಾಮದ ರೈತರ ಗದ್ದೆಗಳಿಗೆ ಕಾಡಾನೆಗಳು ನಿರಂತರ ದಾಳಿ ಮಾಡುತ್ತಿದ್ದು, ಏನೂ ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ವೇಳೆ ದಾಳಿ ಮಾಡುತ್ತಿರುವ ಕಾಡಾನೆಗಳು ರೈತರ ಬೆಳೆಗಳನ್ನು ಸರ್ವನಾಶ ಮಾಡಿ ಹೋಗುತ್ತಿವೆ.
ಈ ಕುರಿತು ರೈತರು ಹಾಗೂ ಸುತ್ತ ಮುತ್ತಲ ಪ್ರದೇಶದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗಾಲಾದರೂ ಈ ಕಾಡಾನೆಗಳನ್ನು ಕಾಡಿಗಟ್ಟಿ ರೈತರ ಬೆಳೆಗಳನ್ನು ಉಳಿಸಿ ಎಂದೂ ರೈತರು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮನವಿ ಮಾಡುತ್ತಿದ್ದಾರೆ.