ETV Bharat / state

ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು.. ಗಜಪಡೆ ನಡೆದಿದ್ದೇ ಹಾದಿ - ಈಟಿವಿ ಭಾರತ್ ಕನ್ನಡ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಹೆಚ್ಚಾಗಿದೆ.

ಕಾಫಿ ತೋಟದಲ್ಲಿ ಆನೆಗಳು ದಾಟುತ್ತಿರುವ ದೃಶ್ಯ
ಕಾಫಿ ತೋಟದಲ್ಲಿ ಆನೆಗಳು ದಾಟುತ್ತಿರುವ ದೃಶ್ಯ
author img

By

Published : Aug 2, 2023, 11:06 PM IST

ಕಾಫಿ ತೋಟದಲ್ಲಿ ಆನೆಗಳು ದಾಟುತ್ತಿರುವ ದೃಶ್ಯ

ಚಿಕ್ಕಮಗಳೂರು: ರಾಜ್ಯದ ಪ್ರವಾಸಿಗರ ಸ್ವರ್ಗವೆಂದೇ ಹೇಳಲಾಗುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಬಂದು ಹೋಗಲಷ್ಟೇ ಸ್ವರ್ಗವೆನಿಸುತ್ತದೆ. ಆದರೆ, ಇಲ್ಲಿ ನೆಲೆಗೊಂಡು ಜೀವನ ಮಾಡುವವರಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗತೊಡಗಿದೆ. ಮೂಡಿಗೆರೆಯ ಒಂದೇ ಕಾಫಿ ಎಸ್ಟೇಟ್‌ನಲ್ಲಿ 16 ಕಾಡಾನೆಗಳು ಒಂದು ವಾರದಿಂದ ಬೀಡು ಬಿಟ್ಟಿದ್ದು, ಎಲಿಫ್ಯಾಂಟ್‌ ಟಾಸ್ಕ್‌ ಫೋರ್ಸ್‌ನ ಆನೆ ಓಡಿಸುವ ಪ್ರಯತ್ನ ಸಂಪೂರ್ಣ ವ್ಯರ್ಥವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳು ಹಾಗೂ ಮಾನವನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕಾಡಾನೆಗಳು ಪದೇ ಪದೆ ದಾಳಿ ನಡೆಸುತ್ತಿದ್ದು, ಇಲ್ಲಿನ ರೈತರು, ಜನರು ಆತಂಕದಿಂದ ಜೀವನ ಸಾಗಿಸುವಂತಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು ಕಾಫಿ, ಅಡಿಕೆ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ. ಅಲ್ಲದೇ ಇದರಿಂದ ರೈತರು ಆತಂಕದಿಂದ ಬದುಕುವಂತಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಜಿ. ಹೊಸಳ್ಳಿ ಗ್ರಾಮದಲ್ಲಿರುವ ಟಾಟಾ ಎಸ್ಟೇಟ್​ನಲ್ಲಿ ಆನೆಗಳು ಬೀಡು ಬಿಟ್ಟಿವೆ. ಒಂದಲ್ಲ ಎರಡಲ್ಲ ಬರೋಬ್ಬರಿ 16 ಕಾಡಾನೆಗಳು ಎಸ್ಟೇಟ್​ನ ತೋಟದಲ್ಲಿ ಸಾಲಾಗಿ ಸಾಗುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಕಳೆದ ಅನೇಕ ದಿನಗಳಿಂದ ಜಿ. ಹೊಸಳ್ಳಿ, ಅರೇಹಳ್ಳಿ, ಚೀಕನಹಳ್ಳಿ, ಮಾಕೋನಹಳ್ಳಿ, ಮಲಸಾವರ ಸುತ್ತಮುತ್ತಲ ಪ್ರದೇಶಗಳಲ್ಲಿ ಈ ಕಾಡಾನೆಗಳು ಸುತ್ತು ಹೊಡೆಯುತ್ತಿವೆ.

ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಗ್ರಾಮಸ್ಥರ ಆಕ್ರೋಶ

ಅಪಾರ ಪ್ರಮಾಣದಲ್ಲಿ ಬೆಳೆನಷ್ಟ: ಗುಂಪಿನಲ್ಲಿ ಮರಿಯಾನೆಗಳು ಇದ್ದು, ಕೆಲವೊಮ್ಮೆ ಜನಗಳ ಮೇಲೂ ಎಗರಿ ಬರುತ್ತಿವೆ. ಈ ಕಾಡಾನೆಗಳ ಹಿಂಡಿನಿಂದ ಈ ಭಾಗದಲ್ಲಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವ ಸಂದರ್ಭದಲ್ಲಿ ಎಲ್ಲಿ ಆನೆಗಳು ಪ್ರತ್ಯಕ್ಷವಾಗುತ್ತವೆ ಎಂದು ಜನರು ಆತಂಕದಿಂದ ಬದುಕುವಂತಾಗಿದೆ. ಅಪಾರ ಪ್ರಮಾಣದಲ್ಲಿ ಬೆಳೆನಷ್ಟವನ್ನು ಉಂಟು ಮಾಡುತ್ತಿವೆ. ಅರಣ್ಯ ಇಲಾಖೆಯ ಎಲಿಪೆಂಟ್ ಟಾಸ್ಕ್ ಪೋರ್ಸ್ ಸಿಬ್ಬಂದಿ ಆನೆಗಳನ್ನು ಓಡಿಸಲು ಪ್ರಯತ್ನಿಸಿದರೂ ಅವು ಸ್ಥಳಬಿಟ್ಟು ಕದಲುತ್ತಿಲ್ಲ. ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಅಲೆದಾಡುತ್ತ ಕಾಫಿ ತೋಟಗಳನ್ನು ಪುಡಿಗೈಯುತ್ತಿವೆ. ಇದರಿಂದಾಗಿ ಕಾಫಿ ತೋಟಗಳಿಗೆ ಹೋಗಲು ಜನ ಭಯ ಪಡುವಂತಾಗಿದೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಚಿಕ್ಕಮಗಳೂರಲ್ಲಿ ರೈತ ಬಲಿ.. ಭೈರನ ಸೆರೆಯಿಂದ ನಿಟ್ಟುಸಿರು ಬಿಟ್ಟ ಜನರಿಗೆ ಮತ್ತೆ ಆತಂಕ

ಸೂಕ್ತ ಪರಿಹಾರ ಒದಗಿಸುವಂತೆ ಕಾಫಿ ಬೆಳೆಗಾರರ ಒತ್ತಾಯ: ಕಾರ್ಮಿಕರು ಸಹ ಕೆಲಸಕ್ಕೆ ಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿಯನ್ನೇ ನಂಬಿರುವ ನಮಗೆ ಇವುಗಳ ಉಪಟಳದಿಂದ ಸಾಕಷ್ಟು ಹಿಂಸೆ ಅನುಭವಿಸುವಂತಾಗಿದೆ. ಆನೆಗಳ ದಾಳಿಯಿಂದ ನಮಗೆ ಸರಿಯಾಗಿ ಬೆಳೆ ಸಿಗುತ್ತಿಲ್ಲ. ನಮ್ಮ ಜಮೀನನ್ನ ದಯವಿಟ್ಟು ಅರಣ್ಯ ಇಲಾಖೆಯವರೇ ತೆಗೆದುಕೊಂದು ಸೂಕ್ತ ಪರಿಹಾರವನ್ನು ಒದಗಿಸಬೇಕೆಂದು ಕಾಫಿ ಬೆಳೆಗಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹಳಿಯಾಳ-ಯಲ್ಲಾಪುರ ಹೆದ್ದಾರಿಯಲ್ಲಿ ವಾಹನ ಚಾಲಕರಿಗೆ ಗಜರಾಜನ ದರ್ಶನ- ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.