ETV Bharat / state

ಆನೆ ದಂತ ಸಾಗಣೆ: ನಾಲ್ವರ ಬಂಧನ

ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಚಿಕ್ಕಮಗಳೂರಿನ ಗ್ರಾಮಾಂತರ ಪೊಲೀಸರು ಮೂಗ್ತಿಹಳ್ಳಿಯಲ್ಲಿ ಬಂಧಿಸಿದ್ದಾರೆ.

Elephant tooth transport
ಆನೆ ದಂತ ಸಾಗಣೆ
author img

By

Published : Feb 29, 2020, 3:37 PM IST

ಚಿಕ್ಕಮಗಳೂರು: ಆನೆ ದಂತ ಮಾರಾಟ ಮಾಡಲು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ನಾಲ್ವರನ್ನು ಚಿಕ್ಕಮಗಳೂರಿನ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶೃಂಗೇರಿ ತಾಲೂಕಿನ ಶಬರೀಶ್, ವಿಜಯ್, ಯೋಗೀಶ್, ಮಧೂಸೂದನ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಆನೆ ದಂತ ಹಾಗೂ ಐದು ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಚಿಕ್ಕಮಗಳೂರಿಗೆ ಆಗಮಿಸುವಾಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಆನೆ ದಂತ ಸಾಗಿಸುತ್ತಿದ್ದ ಕಾರು

ಆರೋಪಿ ಶಬರೀಶ್ ಶೃಂಗೇರಿ ವಿಧಾನಸಭಾ ಕ್ಷೇತ್ರದ ಪಕ್ಷವೊಂದರ ಐಟಿ ಸೆಲ್ ಮುಖ್ಯಸ್ಥ ಹಾಗೂ ಕಾಂಗ್ರೆಸ್ ಶಾಸಕರೊಬ್ಬರ ಆಪ್ತ ಎಂದೂ ಹೇಳಲಾಗುತ್ತಿದೆ. ಕಾರಿನಲ್ಲಿ ಐದು ಲಕ್ಷ ನಗದು ಸಿಕ್ಕಿದ್ದು, ಶೃಂಗೇರಿಯ ಗಾಂಧಿ ಮೈದಾನದಲ್ಲಿ ಪ್ರವಾಸಿ ವಾಹನಗಳ ಪಾರ್ಕಿಂಗ್‍ಗೆ ಪಟ್ಟಣ ಪಂಚಾಯಿತಿ ಹರಾಜು ನಡೆಸಿತ್ತು. ಆ ಹರಾಜಿನಲ್ಲಿ ಶಬರೀಶ್ ಕೂಡ ಪಾಲ್ಗೊಂಡಿದ್ದ. ನಿನ್ನೆ ನಡೆದ ಹರಾಜಿನಲ್ಲಿ ವಾಹನ ಪಾರ್ಕಿಂಗ್ ಗುತ್ತಿಗೆ ಬೇರೆಯವರಿಗೆ ಆಗಿದ್ದು, ಆ ಐದು ಲಕ್ಷ ಹಣ ಹಾಗೂ ಎರಡು ಆನೆ ದಂತದೊಂದಿಗೆ ಶಬರೀಶ್ ಚಿಕ್ಕಮಗಳೂರಿಗೆ ಆಗಮಿಸುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಚಿಕ್ಕಮಗಳೂರಿನಲ್ಲಿ ಜಿಲ್ಲಾ ಉತ್ಸವ ನಡೆಯುತ್ತಿದ್ದು, ಪೊಲೀಸರು ಬ್ಯುಸಿ ಇರ್ತಾರೆ. ಸುಲಭವಾಗಿ ಸಾಗಿಸಬಹುದು ಅಥವಾ ಮಾರಾಟ ಮಾಡಬಹುದು ಎಂದುಕೊಂಡು ಬಂದ ನಾಲ್ವರು ಆರೋಪಿಗಳು ಮಾಲು ಸಮೇತ ಪೊಲೀಸರ ಅತಿಥಿಯಾಗಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.