ETV Bharat / state

ಚಿಕ್ಕಮಗಳೂರು : ಅಕ್ರಮ ಕಳ್ಳ ಭಟ್ಟಿ ಸಾರಾಯಿ ವಶಪಡಿಸಿಕೊಂಡ ಅಬಕಾರಿ ಅಧಿಕಾರಿಗಳು

author img

By

Published : Jun 25, 2021, 9:42 PM IST

ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮನೆಯೊಂದರಲ್ಲಿ ಈ ಕಳ್ಳಭಟ್ಟಿ ಸಂಗ್ರಹಿಸಿಡಲಾಗಿತ್ತು. 60 ಲೀಟರ್ ಕಳ್ಳಬಟ್ಟಿ, 200 ಲೀಟರ್ ಬೆಲ್ಲದ ಕೊಳೆಯನ್ನ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ..

kallabhatti
kallabhatti

ಚಿಕ್ಕಮಗಳೂರು : ಅಕ್ರಮವಾಗಿ ಕಳ್ಳ ಭಟ್ಟಿ ಸಾರಾಯಿ ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಈ ವೇಳೆ 60 ಲೀಟರ್ ಕಳ್ಳ ಬಟ್ಟಿ ವಶಕ್ಕೆ ಪಡೆಯಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಕಾಳಿ ಕಟ್ಟೆ ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆಯಲಾಗಿದೆ. ಅಬಕಾರಿ ಇನ್ಸ್‌ಪೆಕ್ಟರ್ ಲೋಕೇಶ್ ಅವರಿಂದ ಈ ದಾಳಿ ನಡೆದಿದೆ.

ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮನೆಯೊಂದರಲ್ಲಿ ಈ ಕಳ್ಳಭಟ್ಟಿ ಸಂಗ್ರಹಿಸಿಡಲಾಗಿತ್ತು. 60 ಲೀಟರ್ ಕಳ್ಳಬಟ್ಟಿ, 200 ಲೀಟರ್ ಬೆಲ್ಲದ ಕೊಳೆಯನ್ನ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೂಡಿಗೆರೆ ಅಬಕಾರಿ ಅಧಿಕಾರಿಗಳು ಪ್ರಕರಣ ದಾಖಲಿಸಿ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.