ಚಿಕ್ಕಮಗಳೂರು: ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 11.50 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹೊಡೆಯಾಲ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಎಂ.ಎಸ್.ಐ. ಎಲ್ ಮೇಲೆ ದಾಳಿ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇನ್ಸ್‌ಪೆಕ್ಟರ್ ಹನುಮಂತಪ್ಪ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು,11.50 ಲಕ್ಷ. ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ತೆರಿಗೆ ಪಾವತಿಸದ ಹಾಗೂ ಬಿಯರ್ನೊಂದಿಗೆ ಹೆಚ್ಚುವರಿಯಾಗಿ ದೊರೆತ ಮದ್ಯ ವಶಕ್ಕೆ ಪಡೆದಿದ್ದಾರೆ.
ಎಂ.ಎಸ್.ಐ.ಎಲ್ ಸಿಬ್ಬಂದಿ ದರ್ಶನ್, ಅನಿಲ್ ಪರಾರಿಯಾಗಿದ್ದಾರೆ. ಈ ಕುರಿತು ಎನ್.ಆರ್.ಪುರ ವಲಯ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.