ಚಿಕ್ಕಮಗಳೂರು: ಬೆಳೆ ನಷ್ಟದಿಂದ ರೈತನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಗೇನಹಳ್ಳಿಯಲ್ಲಿ ನಡೆದಿದೆ.
ಮಲ್ಲೇಶ್ (50) ಮೃತ ದುರ್ದೈವಿ. ತನ್ನ ಎರಡು ಎಕರೆ ಜಮೀನಿನಲ್ಲಿ 4 ಲಕ್ಷ ರೂ. ವೆಚ್ಚ ಮಾಡಿ ಆಲೂಗಡ್ಡೆ ಬೆಳೆದಿದ್ದ. ಆದರೆ ಆಲೂಗೆಡ್ಡೆ ಬೆಳೆ ನಷ್ಟವಾಗಿದ್ದರಿಂದ ಬೇಸತ್ತು ತನ್ನ ಮನೆಯ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉತ್ತಮ ಬೆಳೆ ನಿರೀಕ್ಷೆಯಲ್ಲಿ ಸಾಲ ಮಾಡಿ ಹೊಸ ಮನೆ ಸಹ ಕಟ್ಟಿದ್ದರು. ಜೊತೆಗೆ ಕಳೆದ ಮೂರು ವರ್ಷಗಳಿಂದ ಸತತವಾಗಿ ನಷ್ಟ ಅನುಭವಿಸುತ್ತಿರುವ ರೈತ ಮಲ್ಲೇಶ್, ಬ್ಯಾಂಕಿನಲ್ಲಿ 2 ಲಕ್ಷ ರೂ. ಹಾಗೂ 8 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.