ETV Bharat / state

ಚಿಕ್ಕಮಗಳೂರು: ಎಲೆಚುಕ್ಕಿ ರೋಗಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ - ಶೃಂಗೇರಿ ಪೊಲೀಸರು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತೆಕ್ಕೂರು ಸಮೀಪದ ಕೊಡತಲು ಗ್ರಾಮದಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದರಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೈತ
ರೈತ
author img

By

Published : Nov 11, 2022, 1:55 PM IST

ಚಿಕ್ಕಮಗಳೂರು: ಅಡಿಕೆ ಬೆಳೆಗೆ ಮಿತಿ ಮೀರಿದ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದರಿಂದ ಮನನೊಂದು ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ತೆಕ್ಕೂರು ಸಮೀಪದ ಕೊಡತಲು ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತರನ್ನು 35 ವರ್ಷದ ಅಭಿಲಾಷ್ ಎಂದು ಗುರುತಿಸಲಾಗಿದೆ. ಇವರು ಅಡಿಕೆ ತೋಟದ ನಿರ್ವಹಣೆಗೆಂದು ಶೃಂಗೇರಿ ಖಾಸಗಿ ಬ್ಯಾಂಕಿನಲ್ಲಿ 3.50 ಸಾವಿರ ರೂ ಹಾಗೂ ಕೈ ಸಾಲ ಮಾಡಿಕೊಂಡಿದ್ದರು. ಆದರೆ, ಅಡಿಕೆಗೆ ತಗುಲಿರುವ ಎಲೆಚುಕ್ಕಿ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ರೈತ ಕೂಡ ತೀವ್ರ ಕಂಗಾಲಾಗಿದ್ದರು.

ತೋಟಕ್ಕೆ ಆವರಿಸಿದ ರೋಗ ಕ್ರಮೇಣ ಇಡೀ ತೋಟಕ್ಕೆ ಆವರಿಸಿತ್ತು. ಇದರಿಂದ ಮನನೊಂದ ಅಭಿಲಾಷ್ ತೀವ್ರ ಚಿಂತಾಕ್ರಾಂತರಾಗಿದ್ದರು. ಇಂದು ಬೆಳಗ್ಗೆ ರೋಗ ನಿಯಂತ್ರಣಕ್ಕೆಂದು ಮನೆಯಲ್ಲಿ ತಂದಿಟ್ಟಿದ್ದ ಕೀಟ ನಾಶಕ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶೃಂಗೇರಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ವಿದ್ಯುತ್ ಪ್ರವಹಿಸಿ ಓರ್ವ, ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ರೈತ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.