ಚಿಕ್ಕಮಗಳೂರು: ಸಾಲ ತೀರಿಸಲಾಗದೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿಯ ನೆಮ್ಮಾರ್ ಸಮೀಪದ ಮದ್ಲೆಬೈಲು ಗ್ರಾಮದಲ್ಲಿ ನಡೆದಿದೆ.
ಶಿವಪ್ಪ ನಾಯಕ, ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಮೂಡಿಗೆರೆ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಕೆರೆಕಟ್ಟೆಯಲ್ಲಿ ಜೀವನ ಸಾಗಿಸುತ್ತಿದ್ದರು. ನಂತರ ಸರ್ಕಾರದ ಪುನರ್ವಸತಿ ಯೋಜನೆಯಡಿ ಮದ್ಲೆಬೈಲಿನಲ್ಲಿ ಮೂರು ಎಕರೆ ಜಾಗವನ್ನು ಖರೀದಿಸಿ ಹೆಂಡತಿ, ಮಕ್ಕಳ ಜೊತೆ ಕೃಷಿ ಮಾಡುತ್ತಿದ್ದರು.
ಸಹಕಾರಿ ಬ್ಯಾಂಕ್ , ರಾಷ್ಟ್ರೀಯ ಬ್ಯಾಂಕ್ನಲ್ಲಿ ಲಕ್ಷಾಂತರ ಹಣವನ್ನು ವ್ಯವಸಾಯ ಮಾಡಲು ಸಾಲ ಪಡೆದಿದ್ದ. ಸಾಲ ಮರುಪಾವತಿ ಮಾಡಲಾಗದೇ ತಮ್ಮ ತೋಟದಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶೃಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿನೀಡಿ, ಪರಿಶೀಲನೆ ನಡೆಸಿದ್ದಾರೆ.