ಚಿಕ್ಕಬಳ್ಳಾಪುರ: ಕುಡಿಯುವ ನೀರಿಗಾಗಿ ಜಗಳವಾಡಿಕೊಂಡು, ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ತುಳುವನೂರಿನಲ್ಲಿ ನಡೆದಿದೆ. ನರಸಿಂಹಪ್ಪ (60) ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಗ್ರಾಮದ ವಿಜಯ್ ಕುಮಾರ್ ಎಂಬಾತ ಹಲ್ಲೆ ಎಸಗಿದ ವ್ಯಕ್ತಿ ಎನ್ನಲಾಗಿದೆ.
ನರಸಿಂಹಪ್ಪನ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳಿಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.