ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಆತಂಕ: ಕೇರಳ ಪ್ರವಾಸಿಗರ ತಡೆಗೆ ಒತ್ತಾಯ - ಕೇರಳ ಪ್ರವಾಸಿಗರ ತಡೆಗೆ ಒತ್ತಾಯ

ಕೇರಳದಿಂದ ಚಿಕ್ಕಮಗಳೂರು ಜಿಲ್ಲೆಗೆ ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್​ ಪ್ರಕರಣ ಹೆಚ್ಚುವ ಆತಂಕ ಎದುರಾಗಿದೆ.

Etv Bharat
Etv Bharat
author img

By ETV Bharat Karnataka Team

Published : Dec 19, 2023, 9:11 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಆತಂಕ, ಕೇರಳ ಪ್ರವಾಸಿಗರ ತಡೆಗೆ ಒತ್ತಾಯ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿಗೆ ಬಂದು ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾರೆ. ಇದೀಗ ಪ್ರತಿನಿತ್ಯ ಸಾವಿರಾರು ಕೇರಳಿಗರು ಜಿಲ್ಲೆಗೆ ಬರುವುದರಿಂದ ಕೊರೊನಾ ರೂಪಾಂತರಿ ವೈರಸ್​ ಹರಡುವ ಭೀತಿ ಎದುರಾಗಿದೆ. ಕೇರಳದಿಂದ ಇಲ್ಲಿಗೆ ಆಗಮಿಸುವ ಪ್ರವಾಸಿಗರು ಹೋಟೆಲ್, ಲಾಡ್ಜ್, ರೆಸಾರ್ಟ್‍ಗಳಲ್ಲಿ ತಂಗುತ್ತಿದ್ದಾರೆ. ಇದರಿಂದ ಮತ್ತೆ ಕೊರೊನಾ ಹರಡುವ ಸಾಧ್ಯತೆ ಇದ್ದು, ಸರ್ಕಾರ ಕೇರಳದಿಂದ ಆಗಮಿಸುವ ಪ್ರವಾಸಿಗರಿಗೆ ನಿರ್ಬಂಧ ಹೇರಬೇಕೆಂದು ಜನರು ಆಗ್ರಹಿಸಿದ್ದಾರೆ.‌

ಸಾಧಾರಣ ಮಳೆಯಿಂದಾಗಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಏಜೆನ್ಸಿಗಳ ಮೂಲಕ ಪ್ಯಾಕೇಜ್​ನಲ್ಲಿ ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಅದೇ ಏಜೆನ್ಸಿಗಳ ಮೂಲಕ ಜಿಲ್ಲೆಗೆ ಆಗಮಿಸುವ ಕೇರಳದ ಪ್ರವಾಸಿಗರು ವಾರಗಟ್ಟಲೇ ಜಿಲ್ಲೆಯಲ್ಲೇ ತಂಗುತ್ತಾರೆ. ಬಳಿಕ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳು, ಶೃಂಗೇರಿ, ಹೊರನಾಡು, ಕಳಸ ಸೇರಿದಂತೆ ಪ್ರವಾಸ ತಾಣಗಳಿಗೆ ಭೇಟಿ ನೀಡುತ್ತಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಸ್ಥಳೀಯರಾದ ಕೃಷ್ಣೇಗೌಡ, ಕೇರಳದಲ್ಲಿ ಕೊರೊನಾ ರೂಪಾಂತರಿ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲೂ ಕೊರೊನಾ ರೂಪಾಂತರಿ ವೈರಸ್​ ಹರಡುವ ಭೀತಿ ಎದುರಾಗಿದೆ. ಈ ಹಿಂದೆ ಕೊರೊನಾ ಬಂದ ಸಂದರ್ಭದಲ್ಲಿ ನಾವು ಅನುಭವಿಸಿದ ಕಷ್ಟಗಳನ್ನು ಮರೆತಿಲ್ಲ. ಜಿಲ್ಲೆಯಿಂದ ನೂರಾರು ಅಯ್ಯಪ್ಪ ಭಕ್ತರು ಸೇರಿದಂತೆ ಪ್ರವಾಸಿಗರು ಕೇರಳಕ್ಕೆ ತೆರಳುತ್ತಿದ್ದಾರೆ. ಕೇರಳದಿಂದ ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರಿಂದ ಕೇರಳದಲ್ಲಿ ಕಂಡು ಬಂದಿರುವ ಕೊರೊನಾ ರೂಪಾಂತರಿ ವೈರಸ್​ ಇಲ್ಲೂ ಹರಡುವ ಭೀತಿ ಎದುರಾಗಿದೆ. ಈ ಸಂಬಂಧ ಕೇರಳದಿಂದ ಬರುವ ಪ್ರವಾಸಿಗರನ್ನು ಜಿಲ್ಲಾಡಳಿತ ತಡೆಯಬೇಕು. ಜೊತೆಗೆ ಸೂಕ್ತ ತಪಾಸಣೆ ನಡೆಸಬೇಕು. ಜಿಲ್ಲೆಯಿಂದ ಕೇರಳಕ್ಕೆ ತೆರಳುವವರನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ರಾಮೇಗೌಡ ಮಾತನಾಡಿ, ಕೇರಳದಲ್ಲಿ ರೂಪಾಂತರಿ ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದರೂ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಂಡಂತೆ ಕಾಣುತ್ತಿಲ್ಲ. ಇದರಿಂದ ಜಿಲ್ಲೆಯಲ್ಲಿ ಕೋವಿಡ್​ ಹರಡುವ ಸಾಧ್ಯತೆ ಇದೆ. ಈ ಹಿಂದೆ ಕೇರಳದಲ್ಲಿ ಕೊರೊನಾ ಬಂದು ಸಾಕ್ಷು ಸಾವು ನೋವುಗಳು ಸಂಭವಿಸಿತ್ತು. ಅಂತಹ ಪರಿಸ್ಥಿತಿ ಮತ್ತೆ ಇಲ್ಲಿ ಮರುಕಳಿಸಬಾರದು. ಪೊಲೀಸ್​ ಇಲಾಖೆ ಮತ್ತು ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.

ಈ ಬಾರಿ ಹೊಸ ವರ್ಷ ಮತ್ತು ಕ್ರಿಸ್​ಮಸ್​ ರಜೆ ಹಿನ್ನಲೆ ಜಿಲ್ಲೆಗೆ ಬರುವ ಪ್ರವಾಸಿಗಳ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲಾಡಳಿ ಸೂಕ್ತ ಕ್ರಮಗಳನ್ನು ಕೈಗೊಂಡು ಕೋವಿಡ್​ ರೂಪಾಂತರಿ ವೈರಸ್​ ಹರಡದಂತೆ ಕ್ರಮಕೈಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ 115 ಹೊಸ ಕೋವಿಡ್​ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸಕ್ರಿಯ ಸೋಂಕಿತರ ಸಂಖ್ಯೆ 1749ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಟ್ಟು ದೇಶಾದ್ಯಂತ ಒಟ್ಟಾರೆ 142 ಪ್ರಕರಣಗಳು ದೃಢಪಟ್ಟಿದ್ದರೆ, ಈ ಪೈಕಿ ಕೇರಳವೊಂದರಲ್ಲೇ 115 ಪ್ರಕರಣಗಳು ವರದಿಯಾಗಿದೆ.

ಇದನ್ನೂ ಓದಿ : ಜೆಎನ್ -1 ಹೊಸ ತಳಿಯ ವೈರಸ್ ದುರ್ಬಲ, ಸಂಕ್ರಾಂತಿ ಬಳಿಕ ತಾನಾಗಿಯೇ ಮಾಯವಾಗಲಿದೆ; ಡಾ.ಆಂಜಿನಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.